Thursday, November 14, 2024
Thursday, November 14, 2024

ಮಕ್ಕಳಿಂದ ದುಡಿಸಿಕೊಳ್ಳುವ ಮಾಲೀಕರ ವಿರುದ್ಧ ಕಾನೂನು ಕ್ರಮ

ಮಕ್ಕಳಿಂದ ದುಡಿಸಿಕೊಳ್ಳುವ ಮಾಲೀಕರ ವಿರುದ್ಧ ಕಾನೂನು ಕ್ರಮ

Date:

ಉಡುಪಿ: ಮಕ್ಕಳಿಗೆ ಬಾಲ್ಯದಲ್ಲಿ ಶಿಕ್ಷಣ ಕೊಡಿಸುವುದು ಮುಖ್ಯ ಕರ್ತವ್ಯವಾಗಿದ್ದು, ಮಕ್ಕಳಿಂದ ದುಡಿಮೆ ಮಾಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಘಟನೆಗಳು ಕಂಡುಬಂದಲ್ಲಿ ದುಡಿಸಿಕೊಳ್ಳುವ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಹೇಳಿದರು.

ಅವರು ಮಲ್ಪೆಯ ಓಷಿಯನ್ ಫ್ರೆಶ್ ಎಕ್ಸ್ಪೋರ್ಟ್ ಸಂಸ್ಥೆಯಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ ಉಡುಪಿ ಹಾಗೂ ಓಷಿಯನ್ ಫ್ರೆಶ್ ಎಕ್ಸ್ಪೋರ್ಟ್ ಮಲ್ಪೆ ಇವರ ಸಂಯುಕ್ತ ಆಶ್ರಯದಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016 ರ ಕುರಿತ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವಂತಿಲ್ಲ. 18 ವರ್ಷದ ಒಳಗಿನ ಮಕ್ಕಳನ್ನು ಅಪಾಯಕಾರಿ ಕೆಲಸಗಳಲ್ಲಿ ದುಡಿಸಿಕೊಳ್ಳುವುದು ಸಹ ಶಿಕ್ಷಾರ್ಹ ಅಪರಾಧವಾಗಿದ್ದು, ಅಂತಹ ಪ್ರಕರಣಗಳು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಅಪರಾಧಕ್ಕೆ 6 ತಿಂಗಳುಗಳಿಗೂ ಕಡಿಮೆ ಇಲ್ಲದಂತೆ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಕನಿಷ್ಠ ರೂ. 20,000 ದಿಂದ ಗರಿಷ್ಠ 50,000 ರೂ. ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲಾಗುವುದು ಎಂದರು.

ಬಾಲಕಾರ್ಮಿಕರನ್ನು ಹಾಗೂ ಕಿಶೋರಾವಸ್ಥೆಯ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವುದು ಕಂಡುಬಂದಲ್ಲಿ ಮಕ್ಕಳ ಉಚಿತ ಸಹಾಯವಾಣಿ ಸಂಖ್ಯೆ 1098 ಗೆ ತಕ್ಷಣ ಕರೆ ಮಾಡಿ ದೂರು ನೀಡಬಹುದಾಗಿದೆ ಎಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಮಾತನಾಡಿ, ಬಾಲ ಕಾರ್ಮಿಕ ಮತ್ತು ಕಿಶೋರಾವಸ್ಥೆಯ ಕಾರ್ಮಿಕರ ನಿಷೇಧ ಮತ್ತು ನಿಯಂತ್ರಣ ಕಾಯ್ದೆಯಡಿ, ನಿರೀಕ್ಷಕರಾಗಿ ಅಧಿಸೂಚಿಸಲ್ಪಟ್ಟ ಅಧಿಕಾರಿಗಳು ಜಿಲ್ಲೆಯಲ್ಲಿ ನಿರಂತರವಾದ ಯೋಜಿತ ಹಾಗೂ ಅನಿರೀಕ್ಷಿತ ದಾಳಿ ನಡೆಸಿ, ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ ಅವರನ್ನು ಕೆಲಸದಿಂದ ಬಿಡುಗಡೆಗೊಳಿಸುತ್ತಿದ್ದಾರೆ.

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಸಂಜ್ಞೆಯ ಅಪರಾಧವಾಗಿದ್ದು, ಈ ನಿಟ್ಟಿನಲ್ಲಿ ಮೊಕದ್ದಮೆಗಳನ್ನು ಹೂಡಲು ಪೊಲೀಸ್ ಅಧಿಕಾರಿಗಳು, ಕಾರ್ಮಿಕ ಅಧಿಕಾರಿಗಳ ಜೊತೆಗೆ ಸಾರ್ವಜನಿಕರೂ ಕೈ ಜೋಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ದಿವಾಕರ ಕುಮಾರ್, ರಸಿಕ, ಕವಿತಾ, ಓಷಿಯನ್ ಫ್ರೆಶ್ ಎಕ್ಸ್ಪೋರ್ಟ್ನ ಪಾಲುದಾರ ರಾಮಚಂದ್ರ ಕುಂದರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಅಮೃತಾ ನಿರೂಪಿಸಿದರು. ಪ್ರಭಾರ ಕಾರ್ಮಿಕ ನಿರೀಕ್ಷಕ ರಾಜಶೇಖರ ರೆಡ್ಡಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ ಸಂಭ್ರಮ

ಉಡುಪಿ, ನ.13: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ಪರ್ಯಾಯ...

ಮೀನುಗಾರರಿಗೆ ಎನ್.ಎಫ್.ಡಿ.ಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಉಡುಪಿ, ನ.13: ಅಸಂಘಟಿತ ವಲಯವಾದ ಮೀನುಗಾರಿಕೆ ವಲಯವನ್ನು ಸಂಘಟಿತ ವಲಯವಾಗಿ ರೂಪಿಸುವ...

ಆಳ್ವಾಸ್ ವಿರಾಸತ್-2024: ಮಳಿಗೆ ತೆರೆಯಲು ಆಹ್ವಾನ

ಮೂಡುಬಿದಿರೆ, ನ.13: ಇದೇ ಬರುವ ಡಿಸೆಂಬರ್ 10 ಮಂಗಳವಾರದಿಂದ 15ನೇ ಭಾನುವಾರದವರೆಗೆ...

ಜ್ಞಾನಸುಧಾ: ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ಉಡುಪಿ, ನ.13: ರಾಷ್ಟ್ರದಾದ್ಯಂತ ಎನ್.ಎಸ್.ಎಸ್. ಶಿಬಿರಗಳು ವಿದ್ಯಾರ್ಥಿಗಳನ್ನು ಗ್ರಾಮೀಣ ಬದುಕಿಗೆ ಬೆಸೆಯುವ...
error: Content is protected !!