ಉಡುಪಿ/ ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ನಾಳೆ (ಜುಲೈ 11) ಸೋಮವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (ಸರ್ಕಾರಿ, ಖಾಸಗಿ, ಅನುದಾನಿತ) ರಜೆಯನ್ನು ಘೋಷಿಸಿ ಉಭಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.