Tuesday, November 26, 2024
Tuesday, November 26, 2024

ಪ್ರಾಕೃತಿಕ ವಿಕೋಪ ಸಮಸ್ಯೆ ಕುರಿತು ಜಿಲ್ಲಾಡಳಿತದ ವಾಟ್ಸ್ಆಪ್ ಸಂಖ್ಯೆಗೆ ಮಾಹಿತಿ ನೀಡಿ

ಪ್ರಾಕೃತಿಕ ವಿಕೋಪ ಸಮಸ್ಯೆ ಕುರಿತು ಜಿಲ್ಲಾಡಳಿತದ ವಾಟ್ಸ್ಆಪ್ ಸಂಖ್ಯೆಗೆ ಮಾಹಿತಿ ನೀಡಿ

Date:

ಉಡುಪಿ: ಜಿಲ್ಲೆಯಲ್ಲಿ ಮಳೆಗಾಲದ ಸಮಯದಲ್ಲಿ ಉಂಟಾಗುವ ನೆರೆ ಪ್ರವಾಹ, ಮನೆ ಹಾನಿ, ಮೂಲಭೂತ ಸೌಕರ್ಯಗಳ ಹಾನಿ ಹಾಗೂ ಇನ್ನಿತರ ಯಾವುದೇ ಸಮಸ್ಯೆಗಳ ಬಗ್ಗೆ ಮಾಹಿತಿಯನ್ನು ಸಾರ್ವಜನಿಕರು ಛಾಯಾಚಿತ್ರದೊಂದಿಗೆ ಜಿಲ್ಲಾಡಳಿತದ ಗಮನಕ್ಕೆ ತಂದು, ಆ ಮೂಲಕ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರ ಗಮನಕ್ಕೆ ತರುವುದರೊಂದಿಗೆ ಕ್ಷಿಪ್ರಗತಿಯಲ್ಲಿ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಜಿಲ್ಲಾಡಳಿತವು ದೂರವಾಣಿ ಸಂಖ್ಯೆಯೊಂದಿಗೆ ವಾಟ್ಸ್ಅಪ್ ಸಂಖ್ಯೆಯನ್ನು 9880831516 ಆರಂಭಗೊಳಿಸಿದ್ದು, ಇದರ ಸದುಪಯೋಗವನ್ನು ಪಡೆಯುವುದರೊಂದಿಗೆ ಮಾನ್ಸೂನ್ ಸಂಧರ್ಭದಲ್ಲಿ ಎದುರಾಗುವ ಸಮಸ್ಯೆಗಳಿಗೆ ಸಕಾಲದಲ್ಲಿ ಪರಿಹಾರ ಕಾರ್ಯಕೈಗೊಳ್ಳಲು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸುವಂತೆ ಕೋರಿದೆ.

ಸಾರ್ವಜನಿಕರು ವಾಟ್ಸ್ಅಪ್ ಮೂಲಕ ಯಾವುದೇ ಸಮಸ್ಯೆಗಳಿಗೆ ಸಂಬಂಧಿಸಿದ ವೀಡಿಯೋ, ಛಾಯಾಚಿತ್ರಗಳನ್ನು ಕಳುಹಿಸುವ ಸಂಧರ್ಭದಲ್ಲಿ ಸೂಕ್ತ ಜಿ.ಪಿ.ಎಸ್ ನೊಂದಿಗಿನ ಛಾಯಾಚಿತ್ರ/ ವೀಡಿಯೋ, ಘಟನೆ ನಡೆದ ಸ್ಧಳದ ಖಚಿತ ಮಾಹಿತಿ, ದಿನಾಂಕ ಹಾಗೂ ಸಮಯದೊಂದಿಗೆ, ಘಟಿಸಿರುವ ಸಮಸ್ಯೆಗಳ ಬಗ್ಗೆ ಚುಟುಕಾದ ವಿವರ ಹಾಗೂ ಯಾವ ಇಲಾಖೆಗಳಿಂದ, ಕ್ರಮ ಕೈಗೊಳ್ಳಬೇಕಾಗಿರುತ್ತದೆ ಎಂಬ ಮಾಹಿತಿಯನ್ನು ನಮೂದಿಸಿದ್ದಲ್ಲಿ ತಿಳಿಸಿರುವ ಸಮಸ್ಯೆಗಳ ಕುರಿತು, ವಿಳಂಬರಹಿತವಾಗಿ ಜರೂರಾದ ಕ್ರಮವಹಿಸಲು ಸಾಧ್ಯವಾಗುತ್ತದೆ.

ಪ್ರಸ್ತುತ ಮಳೆಗಾಲದ ಸಂಧರ್ಭದಲ್ಲಿ ಸಂಭವಿಸಬಹುದಾದ ಅವಘಡಗಳು, ಸಾರ್ವಜನಿಕರು ಎದುರಿಸುವ ತೊಂದರೆಗಳು, ಇತರ ಅನಾನುಕೂಲಗಳ ಕುರಿತು ಹಾಗೂ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಪರಿಹಾರವನ್ನು ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರು ದೂರುಗಳನ್ನು ಸಲ್ಲಿಸಲು, ಮಾಹಿತಿಯನ್ನು ಪಡೆಯಲು ಅಥವಾ ಇನ್ನಾವುದೇ ರೀತಿಯಲ್ಲಿ ತುರ್ತು ಸಂಧರ್ಭದಲ್ಲಿ ಜಿಲ್ಲಾಡಳಿತದ ನೆರವನ್ನು ಪಡೆಯುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ದಿನದ 24 ಗಂಟೆಗಳ ಕಾಲ ಕಾರ್ಯಾಚರಿಸುವ ಟೋಲ್ ಫ್ರೀ ಸಂಖ್ಯೆ ( 24*7 ) ಕಂಟ್ರೋಲ್ ರೂಂ – 1077 ಹಾಗೂ ದೂರವಾಣಿ ಸಂಖ್ಯೆ : 0820-2574802 ಪ್ರಸ್ತುತ ಸಾರ್ವಜನಿಕರ ಸೇವೆಗೆ ಚಾಲ್ತಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!