ಉಡುಪಿ: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಹಾಗೂ ಅರಿವು ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ)ಯಡಿ ಸಾಲ ಸೌಲಭ್ಯ ಪಡೆಯಲು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿದ ಅರ್ಹ ಫಲಾನುಭವಿಗಳಿಂದ ಸುವಿಧಾ ಪೋರ್ಟಲ್ www.suvidha.karnataka.gov.in ರಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ http://kvcdcl.karnataka.gov.in ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಉಡುಪಿ ದೂ.ಸಂಖ್ಯೆ: 0820-2574882, ಸಹಾಯವಾಣಿ ಸಂಖ್ಯೆ: 080-22374848 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.