Friday, November 1, 2024
Friday, November 1, 2024

ಡೀಸೆಲ್ ಸಹಾಯಧನ: ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಗೆ ಆ.20 ಕೊನೆಯ ದಿನ

ಡೀಸೆಲ್ ಸಹಾಯಧನ: ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಗೆ ಆ.20 ಕೊನೆಯ ದಿನ

Date:

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಿ, ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ಹಾಗೂ ರೈತರಿಗೆ ಇಂಧನದ ವೆಚ್ಚ ಕಡಿಮೆ ಮಾಡುವ ಸಲುವಾಗಿ ಪ್ರತಿ ಎಕರೆಗೆ 250 ರೂ. ನಂತೆ ಗರಿಷ್ಟ 5 ಎಕರೆಯವರೆಗೆ 1250 ರೂ. ಗಳನ್ನು ಡಿ.ಬಿ.ಟಿ ಮೂಲಕ ಡೀಸೆಲ್ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿ ರೈತರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಗರಿಷ್ಟ 5 ಎಕರೆಯವರೆಗೆ ಫ್ರೂಟ್ಸ್ ಪೋರ್ಟಲ್‌ನಲ್ಲಿ ನಮೂದಿಸಿರುವ ಹಿಡುವಳಿಯ ಆಧಾರದ ಮೇಲೆ ರೈತರಿಗೆ ಡೀಸೆಲ್ ಸಹಾಯಧನ ವರ್ಗಾವಣೆಯಾಗಲಿದೆ.

ಜಿಲ್ಲೆಯ ರೈತರು ಈ ಯೋಜನೆಯ ಪ್ರಯೋಜನ ಪಡೆಯಲು ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ತಮ್ಮ ಜಮೀನಿನ ಎಲ್ಲಾ ಸರ್ವೆ ನಂಬರ್‌ಗಳ ವಿಸ್ತೀರ್ಣವನ್ನು ಫ್ರೂಟ್ಸ್ ಪೋರ್ಟಲ್‌ನಲ್ಲಿ ಆಗಸ್ಟ್ 20 ರ ಒಳಗೆ ನೋಂದಣಿ ಮಾಡಿಸಬೇಕು. ಸದ್ರಿ ದಿನಾಂಕದವರೆಗೆ ಫ್ರೂಟ್ಸ್ ಪೋರ್ಟಲ್‌ನಲ್ಲಿ ನೋಂದಾವಣಿಯಾದ ವಿಸ್ತೀರ್ಣಕ್ಕನುಗುಣವಾಗಿ ಡೀಸೆಲ್ ಸಬ್ಸಿಡಿ ಡಿ.ಬಿಟಿ ಮುಖಾಂತರ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ದೊರೆಯಲಿದೆ.

ಈವರೆಗೆ ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಣಿ ಮಾಡಿಕೊಳ್ಳದ ರೈತರು ಕೂಡಲೇ ನೋಂದಣಿ ಮಾಡಿಸಿಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಉಡುಪಿ, ನ.1: 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ...

ಡೆಮ್‌ಚೋಕ್ ಎಲ್‌ಎಸಿ: ಭಾರತ ಮತ್ತು ಚೀನಾದ ಪಡೆಗಳ ಗಸ್ತು ಆರಂಭ

ಯು.ಬಿ.ಎನ್.ಡಿ., ನ.1: ಪೂರ್ವ ಲಡಾಖ್ ಪ್ರದೇಶದ ನೈಜ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ)...

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಉಡುಪಿ, ನ.1: ಉಡುಪಿ ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್...

ಉಡುಪಿ: ರಾಹುಲ್‌ ವೆಲ್ಲಾಲ್ ಸಂಗೀತ ಸಂಜೆ

ಉಡುಪಿ, ನ.1: ಪ್ರಸಿದ್ಧ ಯುವ ಸಂಗೀತ ಪ್ರತಿಭೆ ರಾಹುಲ್‌ ಆರ್ ವೆಲ್ಲಾಲ್...
error: Content is protected !!