ಮಂಗಳೂರು: ಬಿಜೆಪಿ ಯುವ ಮುಖಂಡ ಸುಳ್ಯದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಕೇರಳದ ಗಡಿಭಾಗದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ಳಾರೆಯ ಮೊಹಮ್ಮದ್ ಶಫೀಕ್ ಮತ್ತು ಸವಣೂರಿನ ಜಾಕೀರ್ ಬಂಧಿತ ಆರೋಪಿಗಳು. ಮತ್ತೊಬ್ಬ ಆರೋಪಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ದ.ಕ. ಎಸ್.ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.
ಬಂಧಿತರಿಗೆ ಸಂಘಟನೆಗಳ ಜತೆಗೆ ಸಂಬಂಧ ಇರುವ ಬಗ್ಗೆ ಸ್ಪಷ್ಟ ಮಾಹಿತಿ ತನಿಖೆಯ ಬಳಿಕವಷ್ಟೇ ತಿಳಿಯಲಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.