ಕಾರ್ಕಳ: ಕೆಸಿಇಟಿ ಇಂಜಿನಿಯರಿಂಗ್ 2022ರ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಸ್ತುತಿ ಎಸ್. ಕೆಸಿಇಟಿ ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ 40ನೇ ರ‍್ಯಾಂಕ್ ಗಳಿಸಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿರುತ್ತಾರೆ.
ಈ ವರ್ಷ ರಾಜ್ಯದಲ್ಲಿ ಒಟ್ಟು 2,10,829 ವಿದ್ಯಾರ್ಥಿಗಳು ಕೆಸಿಇಟಿ ಪರೀಕ್ಷೆ ಬರೆದಿದ್ದು, ಇದರಲ್ಲಿ ಇವಳ ಸಾಧನೆಯು ಶ್ಲಾಘನೀಯ ಸಂಗತಿಯಾಗಿದೆ. ಇವಳು ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಐದು ವಿಷಯಗಳಲ್ಲಿ ನೂರಕ್ಕೆ
ನೂರು ಅಂಕಗಳಿಸಿ, 593 ಅಂಕಗಳೊಂದಿಗೆ ರಾಜ್ಯಕ್ಕೆ 6 ನೇ ರ‍್ಯಾಂಕ್, ಕಾಮೆಡ್-ಕೆ 2022 ರಲ್ಲಿ ರಾಷ್ಟ್ರಮಟ್ಟದಲ್ಲಿ 85ನೇ ರ‍್ಯಾಂಕ್, ಇಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆ.ಇ.ಇ.ಮೈನ್ ಮೊದಲ ಹಂತದ ಪರೀಕ್ಷೆಯಲ್ಲಿ 99.16 ಪರ್ಸೆಂಟೈಲ್ ಗಳಿಸಿ ಅಮೋಘ ಸಾಧನೆ ಮಾಡಿರುವುದನ್ನು ಸ್ಮರಿಸಿಕೊಳ್ಳಬಹುದು.
ಇವರ ಸಾಧನೆಯನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿಯವರು ಶ್ಲಾಘಿಸಿದ್ದಾರೆ.