ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ರೈತರ ಹಾಗೂ ಸಾರ್ವನಿಕರ ಬೇಡಿಕೆಗನುಗುಣವಾಗಿ ವಿವಿಧ ತೋಟಗಾರಿಕೆ ಗಿಡಗಳನ್ನು ಉತ್ಪಾದಿಸಿ, ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.
ಉಡುಪಿ ತಾಲೂಕಿನ ಶಿವಳ್ಳಿ, ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ, ಕುಂದಾಪುರ ತಾಲೂಕಿನ ಕುಂಭಾಶಿ ಹಾಗೂ ಕೆದೂರು ಮತ್ತು ಕಾರ್ಕಳ ತಾಲೂಕಿನ ರಾಮಸಮುದ್ರ ಹಾಗೂ ಕುಕ್ಕಂದೂರು ತೋಟಗಾರಿಕೆ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ಅಡಿಕೆ, ಕಸಿಗೇರು, ಕಾಳುಮೆಣಸು, ನಿಂಬೆ, ಕರಿಬೇವು ಹಾಗೂ ತೆಂಗಿನ ಸಸಿಗಳು ಲಭ್ಯವಿದೆ.
ಹೆಚ್ಚಿನ ಮಾಹಿತಿಗಾಗಿ ಬ್ರಹ್ಮಾವರ ತಾಲೂಕು ವಾರಂಬಳ್ಳಿ ತೋಟಗಾರಿಕೆ ಕ್ಷೇತ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಅಮಿತ್ ಸಿಂಪಿ ಮೊ.ನಂ: 8970642283, ಕುಂದಾಪುರ ತಾಲೂಕು ಕುಂಭಾಶಿ ತೋಟಗಾರಿಕೆ ಕ್ಷೇತ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಉಮೇಶ್ ಬಂಟ್ ಮೊ.ನಂ: 8792644127 ಹಾಗೂ ಕೆದೂರು ತೋಟಗಾರಿಕೆ ಕ್ಷೇತ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಮಧುಕರ್ ಮೊ.ನಂ: 9482166313, ಶಿವಳ್ಳಿ ಮತ್ತು ಕಾರ್ಕಳ ತಾಲೂಕು ರಾಮಸಮುದ್ರ ತೋಟಗಾರಿಕೆ ಕ್ಷೇತ್ರದ ಸಹಾಯಕ ತೋಟಗಾರಿಕೆ ನಿರ್ದೇಶಕ ವರುಣ ಮೊನಂ: 7892326323 ಹಾಗೂ ಕುಕ್ಕಂದೂರು ತೋಟಗಾರಿಕೆ ಕ್ಷೇತ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಕುಮಾರ್ ಮೊ.ನಂ: 9380964158 ಹಾಗೂ ತಾಲೂಕು ಹಿರಿಯ ಸಹಾಯಕ ತೊಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.