ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 7ರಿಂದ ಆಗಸ್ಟ್ 11 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗಸ್ಟ್ 7 ರಂದು ಕರಾವಳಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ 204.5 ಮಿಮೀಕ್ಕಿಂತ ಅಧಿಕ ಮಳೆಯಾಗಲಿದೆ. ಆಗಸ್ಟ್ 8-11 ರವರೆಗೆ ಕರಾವಳಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ 115.6 ರಿಂದ 204.4 ಮಿಮಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.