Monday, November 25, 2024
Monday, November 25, 2024

ಜಿಲ್ಲಾ ರಜತ ಮಹೋತ್ಸವದ ವಿಜೃಂಭಣೆಯ ಆಚರಣೆ: ಜಯಪ್ರಕಾಶ್ ಹೆಗ್ಡೆ

ಜಿಲ್ಲಾ ರಜತ ಮಹೋತ್ಸವದ ವಿಜೃಂಭಣೆಯ ಆಚರಣೆ: ಜಯಪ್ರಕಾಶ್ ಹೆಗ್ಡೆ

Date:

ಉಡುಪಿ: ಉಡುಪಿ ಜಿಲ್ಲೆಯ ಅಸ್ಥಿತ್ವಕ್ಕೆ ಬಂದು ಇದೇ ಆಗಸ್ಟ್ 25 ಕ್ಕೆ 25 ವರ್ಷಗಳು ಪೂರ್ಣಗೊಳ್ಳುತ್ತಿದ್ದು, ಜಿಲ್ಲೆಯು ಸಾಗಿ ಬಂದ ಅಭಿವೃದ್ಧಿ ಕಾರ್ಯಗಳ ಪುನಾರವಲೋಕನದ ರಜತ ಮಹೋತ್ಸವದ ಕಾರ್ಯಕ್ರಮವನ್ನು ಅತ್ಯಂತ
ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , ರಜತ ಮಹೋತ್ಸವ ಕಾರ್ಯಕ್ರಮದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳು ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಅವಿಭಾಜ್ಯ ಅಂಗವಾಗಿದ್ದು , ಜನರು ತಮ್ಮ ಕೆಲಸ ಕಾರ್ಯಗಳಿಗೆ ದೂರದ ಜಿಲ್ಲಾ ಕೇಂದ್ರವಾದ ಮಂಗಳೂರಿಗೆ ಹೋಗಿ ಬರುವುದು ಕಷ್ಟದ ಕೆಲಸವಾಗಿತ್ತು.

ಉಡುಪಿ ಜಿಲ್ಲೆಯನ್ನು ರಚಿಸಬೇಕೆಂಬ ಜನರ ಆಶೋತ್ತರ ಹಾಗೂ ಜನಪ್ರತಿನಿಧಿಗಳ ಪ್ರಯತ್ನ ,ಸಂಘ ಸಂಸ್ಥೆಗಳ ಹೋರಾಟದ ಫಲವಾಗಿ ಅಂದಿನ ಮುಖ್ಯಮಂತ್ರಿಗಳಾದ ಜೆ,ಹೆಚ್.ಪಟೇಲ್ ಅವರು 1997 ರ ಆಗಸ್ಟ್ 25 ರಂದು ಉಡುಪಿ ಜಿಲ್ಲೆಗೆ ಚಾಲನೆ ನೀಡುವ ಮೂಲಕ ಜಿಲ್ಲೆ ಅಸ್ಥಿತ್ವಕ್ಕೆ ಬಂದಿತು ಎಂದರು.

ಜಿಲ್ಲೆಯು ರಚನೆಗೆ ಮೊದಲು ಅಭಿವೃದ್ದಿಯ ಕಾರ್ಯಗಳು ಅಮೆಗತಿಯಲ್ಲಿದ್ದು, ನಂತರದ ದಿನಗಳಲ್ಲಿ ಅಭಿವೃದ್ಧಿಯ ಪರ್ವದತ್ತ ಸಾಗಿ ರಾಜ್ಯದ ಇತರೇ ಜಿಲ್ಲೆಗಳಿಗಿಂತಲೂ ಹೆಚ್ಚಿನ ಅಭಿವೃಧಿ ಕಾರ್ಯಗಳು ಆಗಿವೆ. ಇವು ಕೇವಲ ಸರ್ಕಾರದ ಕಾರ್ಯಗಳಲ್ಲದೇ ಖಾಸಗಿ
ಸೇರಿದಂತೆ ಇತರೇ ಎಲ್ಲಾ ಕ್ಷೇತ್ರದಲ್ಲಿಯೂ ಸಹ ಅಭಿವೃದ್ದಿಯತ್ತ ಸಾಗಿ ಮುನ್ನಡೆಯುತ್ತಿದೆ ಎಂದರು.

ರಜತ ಮಹೋತ್ಸವ ಕಾರ್ಯಕ್ರಮವನ್ನು ಹಿಂದಿನ ದಿನಗಳ ನೆನಪಿನೊಂದಿಗೆ ಮುಂದೆ ಹೋಗಬೇಕೆಂಬ ಕಲ್ಪನೆಯೊಂದಿಗೆ, ಇದೇ ಆಗಸ್ಟ್ 25 ರಿಂದ 2023 ರ ಜನವರಿ ವರೆಗೆ ಜಿಲ್ಲಾ ಹಾಗೂ ತಾಲೂಕು ಮಟ್ಟಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಶಾಸಕ ಕೆ. ರಘುಪತಿ ಭಟ್ ಮಾತನಾಡಿ, ರಜತ ಮಹೋತ್ಸವ ಕಾರ್ಯಕ್ರಮವನ್ನು ಜಿಲ್ಲೆಯ ಜನರ ಸಹಭಾಗಿತ್ವದಲ್ಲಿ ನಡೆಯಬೇಕು. ಅಂದಿನ ಜನಪ್ರತಿನಿಧಿಗಳು, ಸಂಘ ಸಂಸ್ಥೆಯ ಪ್ರತಿನಿಧಿಗಳನ್ನು ಸನ್ಮಾನಿಸಬೇಕು. ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಬೇಕೆಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ರಜತ ಮಹೋತ್ಸವ ಅಂಗವಾಗಿ ನಡೆಯಲಿರುವ ಎಲ್ಲಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು. ಅದಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳುವುದರೊಂದಿಗೆ
ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಸಿದ್ದತೆಗೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಯಿತು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್.,ಅಪರ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಹಾಗೂ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!