ಉಡುಪಿ: ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಇವರ ನೇತೃತ್ವದಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ, ಉಡುಪಿಯ ಅಜ್ಜರಕಾಡು ಆಸ್ಪತ್ರೆಯ ವಠಾರದಲ್ಲಿ ಆಗಸ್ಟ್ 15ರಂದು ಬೆಳಗ್ಗೆ 8:30ಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಅಂಗಾರ ಅವರು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು, ಶಾಸಕರು ಇನ್ನಿತರ ಗಣ್ಯರು ಭಾಗವಹಿಸುತ್ತಾರೆಂದು ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಇದರ ಅಧ್ಯಕ್ಷರಾದ ಸುಂದರ ಪೂಜಾರಿ ಮೂಡುಕುಕ್ಕುಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.