ಮಂಗಳೂರು: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಇವರು ಆಯೋಜಿಸಿರುವ ಪದವಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಮಂಗಳೂರು ವಿಭಾಗ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಡಾ. ಪಿ. ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ಸಂಘದ
ಸಹಯೋಗದಲ್ಲಿ ನಡೆಯಿತು.
ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ 10 ಕಾಲೇಜುಗಳ 56 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾಲೇಜು ಶಿಕ್ಷಣ ಇಲಾಖೆ, ಪ್ರಾದೇಶಿಕ ಕಛೇರಿ ಮಂಗಳೂರು ವಲಯದ ಜಂಟಿ ನಿರ್ದೇಶಕರಾದ ಡಾ. ಜೆನಿಫರ್ ಲೋಲಿಟಾ ಸಿ ಅವರು ವಿಜ್ಞಾನ ವಸ್ತು ಪ್ರದರ್ಶನದ ಉದ್ಘಾಟನೆ ನೆರವೇರಿಸಿ, ವಿಜ್ಞಾನ ಮಾದರಿ ಪ್ರದರ್ಶಿಸಿದ ವಿದ್ಯಾರ್ಥಿಗಳನ್ನು ಶ್ಲಾಘಿಸಿ, ಇವರಿಗೆ ಭವಿಷ್ಯದ ವಿಜ್ಞಾನಿಗಳಾಗುವ ವಿಫುಲ ಅವಕಾಶಗಳಿವೆ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ವಲಯದ ಪ್ರಾದೇಶಿಕ ಕಛೇರಿ ಜಂಟಿ ನಿರ್ದೇಶಕರಾದ ಪ್ರೊ. ರಾಜಶೇಖರ್ ಹೆಬ್ಬಾರ್ ಸಿ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಇದರ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಹಾಜಿ ಎಸ್. ಅಬೂಬಕ್ಕರ್ ಆರ್ಲಪದವು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ. ವಹಿಸಿದ್ದರು. ಕಾಲೇಜಿನ ಮುಖ್ಯ ಶೈಕ್ಷಣಿಕ ಸಂಯೋಜಕರಾದ ಡಾ. ವಸಂತಿ ಪಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕರಾದ ಡಾ. ಸುಧಾಕರನ್ ಟಿ., ಅವರು ಸ್ವಾಗತಿಸಿ, ಪ್ರೊ.ರಘುಪತಿ ವಂದಿಸಿದರು. ಡಾ. ಕೃಷ್ಣಪ್ರಭಾ ಎಂ. ಕಾರ್ಯಕ್ರಮ ನಿರೂಪಿಸಿದರು.