ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟಂಬರ್ 3 ರಂದು ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣ, ಕುಂದಾಪುರ ಹಾಗೂ ಕಾರ್ಕಳದ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ.
ಸ್ಪರ್ಧೆಗಳ ವಿವರ:
ಪುರುಷರಿಗೆ: 100ಮೀ, 200ಮೀ, 400ಮೀ, 800ಮೀ, 1500ಮೀ, 5000ಮೀ ಓಟ, ಉದ್ದ ಜಿಗಿತ, ಎತ್ತರಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110ಮೀ ಹರ್ಡಲ್ಸ್, 4*100ಮೀ ರಿಲೇ, 4*400ಮೀ ರಿಲೇ ಹಾಗೂ ಗುಂಪು ಕ್ರೀಡೆಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್‌ಬಾಲ್, ಥ್ರೋಬಾಲ್.
ಮಹಿಳೆಯರಿಗೆ: 100ಮೀ, 200ಮೀ, 400ಮೀ, 800ಮೀ, 1500ಮೀ, 3000ಮೀ ಓಟ, ಉದ್ದಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4*100ಮೀ ರಿಲೇ, 4-400ಮೀ ರಿಲೇ, ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್ ಪಂದ್ಯಾಟ ನಡೆಯಲಿದೆ.
ಕ್ರೀಡಾಪಟುಗಳು ತಮಗೆ ಸಂಬಂಧಪಟ್ಟ ತಾಲೂಕುಗಳಲ್ಲಿ ನಡೆಯುವ ಕ್ರೀಡಾಕೂಟಗಳಲ್ಲಿ ಭಾಗವಹಿಸಬಹುದಾಗಿದ್ದು, ಆಧಾರ್ ಕಾರ್ಡ್ ಪ್ರತಿಯನ್ನು ತಪ್ಪದೇ ಹಾಜರುಪಡಿತಕ್ಕದ್ದು. ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ಗುಂಪು ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡವು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದ್ದಾರೆ.
ಕ್ರೀಡಾಪಟುಗಳು ಹೆಸರು ಹಾಗೂ ತಂಡಗಳನ್ನು ನೊಂದಾಯಿಸಲು ಆಗಸ್ಟ್ 30 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ.9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.