ಬ್ರಹ್ಮಾವರ: ಉಡುಪಿಯಲ್ಲಿ ಹಡಿಲು ಬಿಟ್ಟ ಫಲವತ್ತಾದ ಕೃಷಿ ಭೂಮಿಗಳನ್ನು ಮತ್ತೆ ಕೃಷಿ ಯೋಗ್ಯ ಭೂಮಿಗಳನ್ನಾಗಿ ಪರಿವರ್ತಿಸಿ ಹಡಿಲು ಭೂಮಿ ಕೃಷಿ ಆಂದೋಲನ ಕೈಗೊಂಡಾಗ ಯುವ ಸಮುದಾಯ ಸ್ವ ಇಚ್ಛೆಯಿಂದ ಆಸಕ್ತಿಯಿಂದ ಪಾಲ್ಗೊಂಡು ಕೃಷಿ ಚಟುವಟಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಹಡಿಲು ಭೂಮಿ ಕೃಷಿಯ ಯಶಸ್ಸಿಗೆ ಕಾರಣರಾದರು ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು.
ಈ ಬಾರಿ ಯುವ ಸಮುದಾಯವೇ ಆಸಕ್ತಿಯಿಂದ ಕೃಷಿ ಕಾರ್ಯದಲ್ಲಿ ತೊಡಗಿ ಹಡಿಲು ಭೂಮಿ ಕೃಷಿ ಮಾಡಿರುವುದು ಹೆಮ್ಮೆಯ ಸಂಗತಿ.
ಇದು ನಿರಂತರವಾಗಿ ಹೀಗೆ ಮುಂದುವರಿದು ಉಡುಪಿ ವಿಧಾನಸಭಾ ಕ್ಷೇತ್ರ ಹಡಿಲು ಭೂಮಿ ಮುಕ್ತ ಮಾಡುವ ಕೇದಾರೋತ್ಥಾನ ಟ್ರಸ್ಟ್ ಕಾರ್ಯ ಸಾಕಾರಗೊಳ್ಳಲಿ ಎಂದರು.
ಕೇದಾರೋತ್ಥಾನ ಟ್ರಸ್ಟ್ ಮತ್ತು ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ ಮೂಲಕ ನೀಲಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾದ ಹಡಿಲು ಭೂಮಿ ಕೃಷಿಯ ಕಡೆ ನಟ್ಟಿ “ಗೌಜು ಗಮ್ಜಲ್-2022” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಡೇ ನಟ್ಟಿ ಪ್ರಯುಕ್ತ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದ್ದು, ಶಾಸಕ ಕೆ. ರಘುಪತಿ ಭಟ್ ಅವರು ಗದ್ದೆಗೆ ಹಾಲನ್ನು ಅರ್ಪಿಸಿ ಕೆಸರು ಗದ್ದೆಯ ಕ್ರೀಡೆಗಳಿಗೆ ಚಾಲನೆ ನೀಡಿ ಸ್ಪರ್ಧೆಯಲ್ಲಿ ಭಾಗವಹಿಸಿದರು.
ನೀಲಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ನೀಲಾವರ ಶ್ರೀ ಮಹಿಷಮರ್ದಿನಿ ದೇವಸ್ಥಾನ ಆಡಳಿತ ಮೊಕ್ತೇಸರರಾದ ರಘುರಾಮ್ ಮಧ್ಯಸ್ಥ, ಗೌಜು ಗಮ್ಜಲ್ ಸಂಘಟಕರಾದ ಪ್ರತಾಪ್ ಹೆಗ್ಡೆ ಮಾರಾಳಿ, ರಾಜೀವ ಕುಲಾಲ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಕೇದಾರೋತ್ಥಾನ ಟ್ರಸ್ಟ್ ನ ಸದಸ್ಯರಾದ ಬಿರ್ತಿ ರಾಜೇಶ್ ಶೆಟ್ಟಿ, ಕನ್ನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಧನಂಜಯ್ ಅಮೀನ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ನಳಿನಿ ಪ್ರದೀಪ್ ರಾವ್, ರಾಜ್ಯ ಎಸ್.ಟಿ ಮೋರ್ಚಾದ ಕಾರ್ಯದರ್ಶಿಗಳಾದ ಉಮೇಶ್ ನಾಯ್ಕ್, ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾದ ರಘುಪತಿ ಬ್ರಹ್ಮಾವರ, ಗ್ರಾಮಾಂತರ ಬಿಜೆಪಿ ಸಹ ವಕ್ತಾರರಾದ ವಸಂತ್ ಸೇರ್ವೆಗಾರ್, ಆರೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಮತಾ ಶೆಟ್ಟಿ, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ದೇವಾಡಿಗ, ಪಕ್ಷದ ಪ್ರಮುಖರಾದ ರಾಜು ಪೂಜಾರಿ, ಮೋಹನ್ ಶೆಟ್ಟಿ, ವಿಶ್ವ ಹಿಂದೂ ಪರಿಷತ್ ಬ್ರಹ್ಮಾವರದ ರಾಘವೇಂದ್ರ, ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸುಧೀರ್ ಶೆಟ್ಟಿ, ಗ್ರಾಮಾಂತರ ಬಿಜೆಪಿ ಮಾಜಿ ಅಧ್ಯಕ್ಷರಾದ ಜ್ಞಾನ ವಸಂತ್ ಶೆಟ್ಟಿ, ಚೇರ್ಕಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಹರೀಶ್ ಶೆಟ್ಟಿ, ಕರ್ಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ತಡಾಲ್ ಸುರೇಶ್ ಶೆಟ್ಟಿ, ವಾರಂಬಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್. ನಾರಾಯಣ್, ನಿವೃತ್ತ ಮುಖ್ಯೋಪಾಧ್ಯಾಯರಾದ ಆರೂರು ತಿಮ್ಮಪ್ಪ ಶೆಟ್ಟಿ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ವಿಜ್ಞಾನಿಗಳಾದ ಡಾ. ಶಂಕರ್ ಮುಂತಾದವರು ಉಪಸ್ಥಿತರಿದ್ದರು.
ಕಮಲಾಕ್ಷ್ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು. ಮನೋಹರ್ ಶೆಟ್ಟಿ ವಂದಿಸಿದರು.