ಕುಂದಾಪುರ: ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢಶಾಲೆಗಳ ವಿದ್ಯಾರ್ಥಿಗಳು, ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಮತ್ತು ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆ ಕಲ್ಯಾಣಪುರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜನೆಗೊಂಡ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ವಿ.ಕೆ.ಆರ್. ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಕ್ಷಮಾ, ಭಾರ್ಗವಿ, ಸನಿಹಾ, ಅಂಕಿತಾ 17 ರ ವಯೋಮಾನದ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಂಸ್ಥೆಯ ಪ್ರಾಂಶುಪಾಲೆ ಚಿಂತನಾ ರಾಜೇಶ್, ದೈಹಿಕ ಶಿಕ್ಷಣ ಶಿಕ್ಷಕರಾದ ರಾಜೇಂದ್ರ ಶೆಟ್ಟಿ, ಉಪಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯಶಿಕ್ಷಕಿ ಶುಭಾ ಕೆ. ಎನ್., ಪ್ರೌಢಶಾಲಾ ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.