ಉಡುಪಿ: ಕ್ರಿಯೇಟಿವ್ ಪಿ.ಯು ಕಾಲೇಜು ಕಾರ್ಕಳ ಇಲ್ಲಿಯ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ‘ಕೈಗಾರಿಕಾ ಭೇಟಿ’ ಕಾರ್ಯಕ್ರಮವನ್ನು ಆಯೋಜಿಸಿತ್ತು. ವಿದ್ಯಾರ್ಥಿಗಳು ಮಂಗಳೂರಿನ ಕೆ.ಎಂ.ಎಫ್ ಕೈಗಾರಿಕೆಗೆ ಭೇಟಿ ನೀಡಿ ಕೈಗಾರಿಕೆಯಲ್ಲಿನ ಹಾಲು ಉತ್ಪಾದನಾ ಘಟಕದ ಪ್ರಕ್ರಿಯೆಗಳು, ಹಂತಗಳು, ಉತ್ಪಾದನಾ ವಿಧಾನಗಳು ಹಾಗೂ ಉತ್ಪನ್ನಗಳ ಬಗ್ಗೆ ಸವಿಸ್ಥಾರವಾದ ಮಾಹಿತಿಯನ್ನು ಸಂಗ್ರಹಿಸಿದರು.
ಹಳೆಯ ಸಾಂಪ್ರದಾಯಿಕ ಕೃಷಿ ಮತ್ತು ಕೃಷಿಯೇತರ ಸಲಕರಣೆಗಳನ್ನು ವೀಕ್ಷಿಸುವ ಸಲುವಾಗಿ ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿರುವ ಗುತ್ತಿನ ಮನೆಗೆ ವಿದ್ಯಾರ್ಥಿಗಳು ಭೇಟಿ ನೀಡಿದರು. ಗುತ್ತಿನ ಮನೆ, ದೈವದ ಮೂರ್ತಿಗಳು, ಕತ್ತಿ, ಅಕ್ಕಿಮುಡಿ, ತಿರಿ, ಜನಪದ ಕಲೆಗಳಾದ ಕೋಲ, ಯಕ್ಷಗಾನ ಇವುಗಳ ಪ್ರಾಮುಖ್ಯತೆಯನ್ನು ಮಕ್ಕಳಿಗೆ ವಿವರಿಸಲಾಯಿತು.
ಸಂಸ್ಥೆಯ ಉಪನ್ಯಾಸಕರಾದ ರಾಘವೇಂದ್ರ ಬಿ ರಾವ್, ಉಮೇಶ್, ಚಂದ್ರಕಾಂತ್, ರಾಜೇಶ್ ಶೆಟ್ಟಿ, ಅಕ್ಷತಾ ಜೈನ್ ಹಾಗೂ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.