Tuesday, September 24, 2024
Tuesday, September 24, 2024

ತೆಂಕನಿಡಿಯೂರು- ಆಂಗ್ಲಭಾಷಾ ಕಾರ್ಯಗಾರ

ತೆಂಕನಿಡಿಯೂರು- ಆಂಗ್ಲಭಾಷಾ ಕಾರ್ಯಗಾರ

Date:

ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿನ ಐ.ಕ್ಯೂ.ಎ.ಸಿ., ಆಂಗ್ಲಭಾಷಾ ವಿಭಾಗ ಹಾಗೂ ಮಣಿಪಾಲ ವಿ.ವಿ.ಯ ಯುರೋಪಿಯನ್ ಸ್ಟಡಿ ಸೆಂಟರ್ ಸಂಯುಕ್ತ ಆಶ್ರಯದಲ್ಲಿ ಯುರೋಪಿಯನ್ ಲಿಟರೇಚರ್ ಹಾಗೂ ಆಂಗ್ಲ ಸಾಹಿತ್ಯ ಸಿದ್ಧಾಂತಗಳ ಕುರಿತಾದ ಒಂದು ದಿನದ ಕಾರ್ಯಾಗಾರ ನಡೆಸಲಾಯಿತು.

ಕಾರ್ಯಾಗಾರಕ್ಕೆ ಚಾಲಕನೆಯಿತ್ತ ಪ್ರಾಂಶುಪಾಲ ಡಾ. ಸುರೇಶ್ ರೈ ಕೆ. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಸ್ನಾತಕೋತ್ತರ ಪದವಿಯಲ್ಲಿ ಅಧ್ಯಯನ ನಡೆಸುವಾಗ ಗಣಮಟ್ಟದ ಇಂತಹ ಕಾರ್ಯಾಗಾರಗಳು ಆಳವಾದ ಜ್ಞಾನಸಂಪದಾನೆಗೆ ಅವಶ್ಯವಾಗಿದ್ದು, ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಲಹೆಯಿತ್ತರು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾವಹಿಸಿದ್ದ ಮಣಿಪಾಲ ವಿ.ವಿ.ಯ ಮಾನವಿಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಪ್ರವೀಣ್ ಶೆಟ್ಟಿ, ಯುರೋಪಿಯನ್ ಸ್ಟಡಿ ಸೆಂಟರ್‌ನ ಸಹಾಯಕ ಪ್ರಾಧ್ಯಾಪಕ ಡಾ. ರೀಚಾ ಗುಪ್ತಾ, ಹಿರಿಯಡ್ಕ ಸರಕಾರಿ ಪದವಿಪೂರ್ವ ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕ ಪ್ರತಾಪ್‌ಚಂದ್ರ ತೋನ್ಸೆ, ಪ್ಲೇಟೋರಿಂದ ಆರಂಭವಾಗಿ ಸಮಕಾಲೀನ ಇಂಗ್ಲೀಷ್ ಸಾಹಿತ್ಯದ ಸೂಕ್ಷ್ಮತೆಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.

ಕಾರ್ಯಾಗಾರದ ಸಂಯೋಜಕ ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಶ್ರೀಧರ್ ಭಟ್ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ, ಸ್ವಾಗತಿಸಿದರು. ವಿದ್ಯಾರ್ಥಿನಿ ದರ್ಶಿನಿ ಶೆಟ್ಟಿ ವಂದಿಸಿದರು. ರವೀನಾ ಕಾರ್ಯಕ್ರಮ ನಿರೂಪಿಸಿದರು.

ಕಾಲೇಜಿನ ಐ.ಕ್ಯೂ.ಎ.ಸಿ. ಸಂಚಾಲಕಿ ಡಾ. ಮೇವಿ ಮಿರಾಂದ, ಆಂಗ್ಲಭಾಷಾ ಸಹಾಯಕ ಪ್ರಾಧ್ಯಾಪಕಿ ಡಾ. ಗೀತಾ ಎನ್. ಹಾಗೂ ಉಪನ್ಯಾಸಕಿಯರಾದ ನಮಿತಾ ಆಚಾರ್ಯ, ಶ್ವೇತಾ, ಏಂಜೆಲಾ ಜಾನ್, ಬೋಧಕ ವೃಂದದವರು ಹಾಗೂ ಪ್ರಥಮ ಮತ್ತು ದ್ವಿತೀಯ ಆಂಗ್ಲಭಾಷಾ ಸ್ನಾತಕೋತ್ತರ ವಿಭಾಗ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಎಸ್.ಎಸ್. ಶಿಬಿರ

ಉಡುಪಿ, ಸೆ.23: ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ತಂಡ, ಕಸ್ತೂರ್ಬಾ ಮೆಡಿಕಲ್...

ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್: ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ, ಸೆ.23: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ (ಹೆಚ್.ಎ.ಎಲ್), ಬೆಂಗಳೂರು ಇವರ ವತಿಯಿಂದ...

ಸೆ. 26: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.23: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಸೆ.23: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ...
error: Content is protected !!