Monday, September 23, 2024
Monday, September 23, 2024

ಕಸಾಪ ಉಡುಪಿ- ಸಾಧಕ ಶಿಕ್ಷಕರಿಗೆ ಗೌರವ ಪುರಸ್ಕಾರ

ಕಸಾಪ ಉಡುಪಿ- ಸಾಧಕ ಶಿಕ್ಷಕರಿಗೆ ಗೌರವ ಪುರಸ್ಕಾರ

Date:

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಹಾಗೂ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲೆಯ 5 ಹಿರಿಯ ಸಾಧಕ ಶಿಕ್ಷಕರಿಗೆ ಗೌರವ ಪುರಸ್ಕಾರ 2022 ನೀಡಿ ಗೌರವಿಸಲಾಯಿತು.

ಸೆಪ್ಟೆಂಬರ್ 5 ರಂದು ಉಡುಪಿಯ ಮಲಬಾರ್ ಅಂಡ್ ಗೋಲ್ಡ್ ಡೈಮಂಡ್ಸ್ ಶಾಖೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಕ್ಷ್ಮೀನಾರಾಯಣ ಭಟ್ (ಶಿಕ್ಷಣ ಹಾಗೂ ರಂಗಭೂಮಿ), ರಾಜೇಂದ್ರ ಭಟ್ ಕೆ (ಶಿಕ್ಷಣ ಹಾಗೂ ನಿರೂಪಣೆ ), ಪ್ರೊ. ನಾರಾಯಣ ಎಂ. ಹೆಗಡೆ (ಶಿಕ್ಷಣ ಹಾಗೂ ಸಂಘಟನೆ), ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ (ಶಿಕ್ಷಣ ಹಾಗೂ ಅರ್ಥಶಾಸ್ತ್ರ), ಡಾ. ರೇಖಾ ವಿ. ಬನ್ನಾಡಿ (ಶಿಕ್ಷಣ ಹಾಗೂ ಸಾಹಿತ್ಯ) ಕ್ಷೇತ್ರದಲ್ಲಿ ಸಲ್ಲಿಸಿದ ಅನನ್ಯ ಸೇವೆಗಾಗಿ ಈ ಪುರಸ್ಕಾರ ನೀಡಲಾಯಿತು.

ಸಭಾಧ್ಯಕ್ಷತೆಯನ್ನು ವಹಿಸಿದ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪ್ರೊ. ಎಂ. ಎಲ್ ಸಾಮಗ ಮಾತನಾಡಿ, ಶಿಕ್ಷಕರ ಸೇವೆ ಬಹುದೊಡ್ಡ ಸೇವೆ. ಸಮಾಜದಲ್ಲಿ ಅವರನ್ನು ಗುರುತಿಸಿ ಗೌರವಿಸುವುದು ಅಗತ್ಯ.

ಈ ನಿಟ್ಟಿನಲ್ಲಿ ಸಾಹಿತ್ಯ ಪರಿಷತ್ತು ಹಾಗೂ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶ್ಲಾಘನೀಯ ಕೆಲಸ ಮಾಡಿದೆ ಎಂದರು.

ಸಮಾರಂಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷರಾದ ಪ್ರೊ. ಶಂಕರ್, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಇದರ ವ್ಯವಸ್ಥಾಪಕ ಹಫೀಜ್ ರೆಹಮಾನ್, ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್ ಪಿ ಉಪಸ್ಥಿತರಿದ್ದರು.

ಹಾಸ್ಯ ಭಾಷಣಕಾರರಾದ ಸಂಧ್ಯಾ ಶೆಣೈ ಸ್ವಾಗತಿಸಿ, ಶ್ರೀನಿವಾಸ್ ಉಪಾಧ್ಯ ವಂದಿಸಿದರು. ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!