Monday, November 25, 2024
Monday, November 25, 2024

ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್- ರೂ 3.64 ಕೋಟಿ ನಿವ್ವಳ ಲಾಭ: ಯಶ್‌ಪಾಲ್ ಸುವರ್ಣ

ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್- ರೂ 3.64 ಕೋಟಿ ನಿವ್ವಳ ಲಾಭ: ಯಶ್‌ಪಾಲ್ ಸುವರ್ಣ

Date:

ಉಡುಪಿ: ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ 2021-22ನೇ ಸಾಲಿನಲ್ಲಿ 240 ಕೋಟಿ ವ್ಯವಹಾರದ ಮೂಲಕ ರೂ 3.64 ಕೋಟಿ ನಿವ್ವಳ ಲಾಭ ಗಳಿಸಿದೆ.

ಕರ್ನಾಟಕ ರಾಜ್ಯ ಸರಕಾರದ ಮೀನುಗಾರಿಕ ಇಲಾಖೆ, ಸಂಸ್ಥೆಯ ಸದಸ್ಯ ಸಹಕಾರಿ ಸಂಸ್ಥೆಗಳು ವೈಯಕ್ತಿಕ ಸದಸ್ಯರು ಹಾಗೂ ಸಮಸ್ತ ಮೀನುಗಾರರ ಸಹಕಾರದಿಂದ ಮೀನು ಮಾರಾಟ, ಡೀಸಿಲ್ ಮಾರಾಟ, ಆರ್ಥಿಕ ಸೇವೆ, ಮೋಬಿಲ್ ಎಣ್ಣೆ ಮಾರಾಟ, ಸೀಮೆಎಣ್ಣೆ ಹಾಗೂ ಮೀನುಗಾರಿಕಾ ಸಲಕರಣೆಗಳ ಮಾರಾಟ ಮತ್ತು ಮಂಜುಗಡ್ಡೆ ವ್ಯವಹಾರಗಳಿಂದ 240 ಕೋಟಿ ವ್ಯವಹಾರ ಮಾಡಿ ನಿರ್ವಹಣಾ ವೆಚ್ಚ, ಸವಕಳಿ ಮತ್ತು ಆಡಳಿತಾತ್ಮಕ ವೆಚ್ಚಗಳನ್ನು ಕಳೆದು ರೂ. 3.64 ಕೋಟಿ ನಿವ್ವಳ ಲಾಭ ದಾಖಲಿಸಿರುವುದಾಗಿ ಫೆಡರೇಶನಿನ ಅಧ್ಯಕ್ಷರಾದ ಯಶ್‌ಪಾಲ್ ಎ ಸುವರ್ಣ ತಿಳಿಸಿದ್ದಾರೆ.

ಮೀನುಗಾರರ ಅಭಿವೃದ್ಧಿಗಾಗಿ ಸ್ಥಾಪನೆಗೊಂಡ ಈ ಸಂಸ್ಥೆ ಮೀನುಗಾರರಿಗೆ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಹಕರಿಸುತ್ತಾ ಮೀನುಗಾರರ ಸ್ವಾವಲಂಬನೆಗಾಗಿ ಪ್ರಯತ್ನಿಸುತ್ತಿದ್ದು, ಹಿಂದಿನ ಹಲವು ವರ್ಷಗಳಿಂದ ಹಲವಾರು ತಾಂತ್ರಿಕ ಕಾರಣಗಳಿಂದ ನಷ್ಟದಲ್ಲಿದ್ದ ಈ ಸಂಸ್ಥೆಯು ಮೀನುಗಾರಿಕೆಗೆ ಉಂಟಾದ ಏರಿಳಿತಗಳ ಸಮಸ್ಯೆಯನ್ನು ಎದುರಿಸಿಕೊಂಡು ಇತ್ತಿಚಿನ 13 ವರ್ಷಗಳಲ್ಲಿ ಒಟ್ಟು 39 ಕೋಟಿ ಲಾಭ ಗಳಿಸಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಸ್ಥಗಳೊಂದಿಗೆ ಗುರುತಿಸಿಕೊಂಡಿದೆ.

ಮಲ್ಪೆ, ಮಂಗಳೂರು ಮತ್ತು ಹಂಗಾರಕಟ್ಟಾ ಮೀನುಗಾರಿಕಾ ಬಂದರಿನಲ್ಲಿ ಸದಸ್ಯರಿಗೆ ಯಶಸ್ವಿ ಆರ್ಥಿಕ ಸೇವಾ ಸೌಲಭ್ಯವನ್ನು ನೀಡಲಾಗುತ್ತಿದ್ದು, ಫೆಡರೇಶನಿನ ಆರ್ಥಿಕ ಸೇವಾ ವಿಭಾಗ, ಮೀನುಗಾರಿಕ ಸಲಕರಣೆಗಳ ಮಾರಾಟ ವಿಭಾಗ ಮತ್ತು ಫೆಡರೇಶನಿನ ಕಚೇರಿಗಳಲ್ಲಿ ಗಣಕೀಕರಣವನ್ನು ಅಳವಡಿಸಿ ಸದಸ್ಯರಿಗೆ ಆಧುನಿಕ ಸೌಲಭ್ಯಗಳನ್ನು ನೀಡಲಾಗುತ್ತಿದೆ.

ಮುಂದಿನ ಸಾಲಿನಲ್ಲಿ ಆರ್ಥಿಕ ಸೇವಾ ವಿಭಾಗದಲ್ಲಿ ಇನ್ನಷ್ಟು ಆಧುನಿಕ ಸೌಲಭ್ಯಗಳಾದ “E Bix” cash Money transfer, International & Domestic (ಇ- ಬಿಕ್ಸ್ ನಗದು ಹಣ ವರ್ಗಾವಣೆ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ), ಆರ್.ಟಿ.ಜಿ.ಎಸ್ ಸೌಲಭ್ಯ, ಇ-ಸ್ಟಾಂಪಿಂಗ್ ಮತ್ತು ಇತರ ಎಲ್ಲಾ ತರಹದ ಸಾಲ ಸೌಲಭ್ಯಗಳನ್ನು ನೀಡುವ ಯೋಜನೆಯನ್ನು ರೂಪಿಸಲಾಗಿದೆ.

2021-22 ನೇ ಸಾಲಿನಲ್ಲಿಯೂ ಸಂಸ್ಥೆಯ ಸದಸ್ಯ ಸಹಕಾರಿ ಸಂಘಗಳ 1268 ಸದಸ್ಯರಿಗೆ 6.34 ಕೋಟಿ ವಿಮಾ ಮೌಲ್ಯದ ಸಿಗ್ನಾ ಪ್ರೋ ಹೆಲ್ತ್ ಗ್ರೂಪ್ ಇನ್ಸುರೆನ್ಸ್ ಕಾರ್ಡ್ನ್ನು ಉಚಿತವಾಗಿ ವಿತರಿಸಲಾಗಿದೆ.

ದ.ಕ ಮತ್ತು ಉಡುಪಿ ಜಿಲ್ಲೆಯ ಸಂಸ್ಥೆಯ ಸದಸ್ಯರ ಮತ್ತು ಸದಸ್ಯೇತರರ 900 ಪ್ರತಿಭಾವಂತ ಮಕ್ಕಳಿಗೆ ರೂ. 18 ಲಕ್ಷ ಮೊತ್ತದ ಪ್ರತಿಭಾ ಪುರಸ್ಕಾರ, ಕಳೆದ ಎರಡು ಮೀನುಗಾರಿಕಾ ಋತುವಿನಲ್ಲಿ ಸಂಸ್ಥೆಯೊಂದಿಗೆ ವ್ಯವಹರಿಸಿದ ಗ್ರಾಹಕ ಸದಸ್ಯರಿಗೆ 3.73 ಕೋಟಿ ಮೊತ್ತದ ಪ್ರೋತ್ಸಾಹಧನ, 63 ಸದಸ್ಯ ಸಹಕಾರಿ ಸಂಘಗಳಿಗೆ ಸುಮಾರು 13 ಲಕ್ಷ ವೆಚ್ಚದಲ್ಲಿ ನೋಟ್ ಕೌಂಟಿಂಗ್ ಯಂತ್ರ ವಿತರಣೆ ಮತ್ತು ಉಭಯ ಜಿಲ್ಲೆಯ ಬಡ ಮೀನುಗಾರರ ವೈದ್ಯಕೀಯ ಚಿಕಿತ್ಸೆಗಾಗಿ ಹಾಗೂ ಸಂಘ ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ.

ಮಲ್ಪೆ ಮೀನುಗಾರಿಕಾ ಬಂದರು ಮತ್ತು ಮಂಗಳೂರು ಮೀನುಗಾರಿಕಾ ಬಂದರಿನ ಹಲವೊಂದು ಸಮಸ್ಯೆಗಳ ಬಗ್ಗೆ ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನಿನ ಅಧ್ಯಕ್ಷರ ನೇತೃತ್ವದಲ್ಲಿ ಸಮಸ್ಯೆಯ ನಿವಾರಣೆಗಾಗಿ ಹಾಗೂ ಮೀನುಗಾರರು ಹಿಡಿದು ತಂದ ಮೀನಿಗೆ ಉತ್ತಮ ಮೌಲ್ಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಸಚಿವರನ್ನು ಭೇಟಿಯಾಗಿ ಮೀನುಗಾರಿಕೆಗೆ ಸಂಬAಧಿಸಿದ ಎಲ್ಲಾ ರೀತಿಯ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕ್ರಮ ಜರಗಿಸಲಾಗಿದೆ.

ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಸಹಕಾರದಿಂದ ಫೆಡರೇಶನ್ ವತಿಯಿಂದ ಮಂಗಳೂರು ನಗರದ ಕೇಂದ್ರ ಭಾಗದಲ್ಲಿ ಸಹಕಾರಿ ಸಂಸ್ಥೆಗಳಿಗೆ, ಮೀನುಗಾರ ಸಂಘಗಳಿಗೆ ಮತ್ತು ಎಲ್ಲಾ ವರ್ಗದ ಮೀನುಗಾರರಿಗೆ ಅನುಕೂಲವಾಗುವ ಉದ್ದೇಶದಿಂದ ಆಧುನೀಕೃತ ಮೀನುಗಾರಿಕೆ ಮತ್ತು ಮೀನಿನ ಉತ್ಪನ್ನಗಳ ಬಗ್ಗೆ ತಾಂತ್ರಿಕ ಮಾಹಿತಿಯನ್ನು ನೀಡುವ ಉದ್ದೇಶದಿಂದ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಬಗ್ಗೆ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.

ಸಮುದ್ರ ಮೀನುಗಾರಿಕೆಯ ಜೊತೆಗೆ ಒಳನಾಡಿನ ಸಿಹಿ ನೀರಿನ ಮೀನುಗಾರಿಕೆಯನ್ನು ಅಭಿವೃದ್ದಿ ಪಡಿಸುವ ಉದ್ದೇಶದಿಂದ ವೈಜ್ಞಾನಿಕ ರೀತಿಯಲ್ಲಿ ಒಳನಾಡಿನ ಮೀನು ಮರಿ ಉತ್ಪಾದನೆಯ ಬಗ್ಗೆ ಮತ್ತು ಮೀನು ಸಾಕಣಿಯ ಬಗ್ಗೆ ಅಧ್ಯಯನ ಮಾಡಿರುವ ಮತ್ತು ಆಳ ಜ್ಞಾನ ಹೊಂದಿರುವವರ ಸಹಕಾರವನ್ನು ಪಡೆದು ಮೀನು ಮರಿ ಉತ್ಪಾದನೆ ಮತ್ತು ಬಿತ್ತನೆಯ ಬಗ್ಗೆ ಹೊಸ ಯೋಜನೆಯನ್ನು ಹಮ್ಮಿಕೊಳ್ಳಲಾಗುವುದು.

ಮಂಗಳೂರು ನಗರದ ಕೇಂದ್ರ ಭಾಗದಲ್ಲಿ ಆಧುನಿಕ ಸೌಲಭ್ಯಗಳನ್ನೊಳಗೊಂಡ ಸುಮಾರು 5 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಪ್ರಧಾನ ಕಚೇರಿ ಹಾಗೂ ಸಮುದಾಯ ಭವನ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಹಾಗೂ ಕಾಪುವಿನಲ್ಲಿ ಆರ್ಥಿಕ ಸೇವಾ ವಿಭಾಗದ ಶಾಖೆಗಳ ಆರಂಭ ಹಾಗೂ ತಾಲೂಕು ಕೇಂದ್ರಗಳಲ್ಲಿ ಮತ್ಸ್ಯ ಕ್ಯಾಂಟೀನ್ ಆರಂಭಿಸುವ ಬಗ್ಗೆಯೂ ಆಡಳಿತ ಮಂಡಳಿ ಕಾರ್ಯಪ್ರವೃತ್ತವಾಗಿದೆ. ವರದಿ ಸಾಲಿನಲ್ಲಿ ಫೆಡರೇಶನ್ 3.64 ಗರಿಷ್ಠ ಲಾಭ ಗಳಿಸಿದ್ದು, ಮುಂದೆ ಕೂಡ ಸಂಸ್ಥೆಯ ಸರ್ವ ಸದಸ್ಯರ ಸಹಕಾರ ಹಾಗೂ ಮೀನುಗಾರರ ಸಹಕಾರದಿಂದ ಸಂಸ್ಥೆಯನ್ನು ಅಭಿವೃದ್ಧಿಯಿಂದ ಉನ್ನತ ಸ್ಥಾನಕ್ಕೆ ಕೊಂಡೊಯ್ಯುವುದಾಗಿ ಅಧ್ಯಕ್ಷರಾದ ಯಶ್‌ಪಾಲ್ ಎ ಸುವರ್ಣ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!