ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ರಾಜ್ಯದಲ್ಲಿರುವ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯ, ಸಂಸ್ಥೆ ಹಾಗೂ ಕಾಲೇಜುಗಳಲ್ಲಿ ಪಿ.ಹೆಚ್.ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಡಿ.ಎಸ್.ಟಿ-ಪಿ.ಹೆಚ್.ಡಿ ಶಿಷ್ಯವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://ksteps.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.