Friday, September 20, 2024
Friday, September 20, 2024

ಯುವಜನರು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು: ವಿಶ್ವನಾಥ್ ಶೆಣೈ

ಯುವಜನರು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು: ವಿಶ್ವನಾಥ್ ಶೆಣೈ

Date:

ಉಡುಪಿ: ಯುವಜನರು ಮತ್ತು ವಿದ್ಯಾರ್ಥಿಗಳು ಸಾಂಪ್ರದಾಯಿಕ ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಬೇಕು ಎಂದು ಉಡುಪಿ ರಾಮಭವನ ಹೋಟೆಲ್ ನ ಮಾಲಕರಾದ ವಿಶ್ವನಾಥ್ ಶೆಣೈ ಹೇಳಿದರು.

ಬೆಸ್ಟ್ ಅಕಾಡೆಮಿ ಉಡುಪಿ, ಗುಣಮಟ್ಟದ ಶಿಕ್ಷಣದ ಜೊತೆಗೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ತರಬೇತಿಯನ್ನು ನೀಡುವ ಗುರಿಯನ್ನು ಹೊಂದಿದ್ದು ಸಂಸ್ಥೆ ಇನ್ನಷ್ಟು ಪ್ರಗತಿ ಸಾಧಿಸಲಿ ಎಂದು ಹೇಳಿದರು.

ಉಡುಪಿಯ ಅಲಂಕಾರ್ ಟಾಕೀಸ್ ಬಳಿ ಲಂಡನ್ ಆಪ್ಟಿಕಲ್ಸ್ ಮಹಡಿಯಲ್ಲಿರುವ ಸಂಸ್ಥೆಯು, ಈಗಾಗಲೇ ಕಂಪ್ಯೂಟರ್ ತರಬೇತಿಯನ್ನು ನೀಡುತ್ತಿದ್ದು ಅದರ ಜೊತೆಗೆ ಇಂಗ್ಲಿಷ್ ಸ್ಪೀಕಿಂಗ್ ಹಾಗೂ ಯು.ಪಿ.ಎಸ್.ಸಿ, ಕೆ.ಪಿ.ಎಸ್.ಸಿ, ಬ್ಯಾಂಕಿಂಗ್ ಐ.ಬಿ.ಪಿ.ಎಸ್ ತರಬೇತಿಯನ್ನು ನೀಡುತ್ತಿದೆ ಎಂದು ರಫೀಕ್ ಖಾನ್ ತಿಳಿಸಿದರು.

ಕಂಪ್ಯೂಟರ್ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿಶ್ವನಾಥ್ ಶೆಣೈರವರು ವಿತರಿಸಿದರು. ಸಂತೋಷ್ ವಂದಿಸಿದರು. ಸಂಸ್ಥೆಯ ತರಬೇತುದಾರರಾದ ಶ್ರೀಲತಾ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!