ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಹುಟ್ಟುಹಬ್ಬದ ಪ್ರಯುಕ್ತ ಮೋದಿ ಬ್ರಿಗೇಡ್ ಉಡುಪಿ ಜಿಲ್ಲೆ ಇವರ ವತಿಯಿಂದ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ನೀಡಲಾಯಿತು ಮತ್ತು ‘ಮೋದಿ ಯೋಜನೆ ಮನೆ ಮನೆಗೆ’ ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಡಾ. ಸುಜಿತ್ ಮತ್ತು ಡಾ. ಸುಭಾಸ್ ಕಿಣಿ, ಜಿಲ್ಲಾಧ್ಯಕ್ಷರಾದ ಸುಭಾಷಿತ್ ಕುಮಾರ್, ಉಪಾಧ್ಯಕ್ಷರುಗಳಾದ ಚಿನ್ಮಯಮೂರ್ತಿ ಮತ್ತು ಚಂದ್ರಕಾಂತ್ ದೇವಾಡಿಗ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೇದಾವತಿ ಹೆಗ್ಡೆ, ಯುವ ಘಟಕದ ಅಧ್ಯಕ್ಷ ನಾಗರಾಜ್ ಶೇಟ್, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.