ಉಡುಪಿ: ಮಂಗಳೂರಿನಲ್ಲಿ ನಡೆದ ಎನ್.ಐ.ಎ ದಾಳಿಯನ್ನು ಖಂಡಿಸಿ ಉಡುಪಿಯಲ್ಲಿ ಪಿ.ಎಫ್.ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಘಟನೆ ಸೆಪ್ಟೆಂಬರ್ 22 ರಂದು ನಡೆದಿದೆ.
ಉಡುಪಿಯ ಡಯಾನ ವೃತ್ತದ ಬಳಿ ಅನುಮತಿ ಇಲ್ಲದೇ ರಸ್ತೆ ತಡೆ ನಡೆಸಿ ಸಂಚಾರಕ್ಕೆ ಅಡ್ಡಿ ಉಂಟುಮಾಡಿದ ಹಿನ್ನಲೆಯಲ್ಲಿ ಪೊಲೀಸರು ರಸ್ತೆಯಿಂದ ತೆರವಾಗುವಂತೆ ಮನವಿ ಮಾಡಿದರೂ ಪ್ರತಿಭಟನಾಕಾರರು ಯಾವುದೇ ಸ್ಪಂದನೆ ನೀಡದ ಕಾರಣ ಗುಂಪನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದರು.