ನವದೆಹಲಿ: ದೇಶಾದ್ಯಂತ ಗುರುವಾರ ಎನ್.ಐ.ಎ, ಇಡಿ ಮತ್ತು ರಾಜ್ಯ ಪೊಲೀಸರ ಜಂಟಿ ಕಾರ್ಯಾಚರಣೆ ನಡೆದಿದೆ. 11 ರಾಜ್ಯಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು 106 ಪಿ.ಎಫ್.ಐ ಸದಸ್ಯರನ್ನು ಬಂಧಿಸಲಾಗಿದೆ.
ಆಂಧ್ರ ಪ್ರದೇಶ, ಅಸ್ಸಾಂ, ದೆಹಲಿ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಪುದುಚೆರಿ, ರಾಜಸ್ಥಾನ, ತಮಿಳುನಾಡು ಮತ್ತು ಉತ್ತರ ಪ್ರದೇಶದಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್, ಲ್ಯಾಪ್ಟಾಪ್, ವಿವಿಧ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಎನ್.ಐ.ಎ ದಾಳಿಯನ್ನು ಖಂಡಿಸಿ ವಿವಿದೆಡೆ ಪಿ.ಎಫ್.ಐ ಮತ್ತು ಎಸ್.ಡಿ.ಪಿ.ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.