Thursday, January 23, 2025
Thursday, January 23, 2025

ನೀರಿನ ಲಭ್ಯತೆಯನ್ನು ಆಧರಿಸಿ ಯೋಜನೆ ರೂಪಿಸಿ

ನೀರಿನ ಲಭ್ಯತೆಯನ್ನು ಆಧರಿಸಿ ಯೋಜನೆ ರೂಪಿಸಿ

Date:

ಉಡುಪಿ: ಜಿಲ್ಲೆಯಲ್ಲಿ ಲಭ್ಯವಿರುವ ನೀರಿನ ಮೂಲಗಳನ್ನು ಆಧರಿಸಿ ಕುಡಿಯುವ ನೀರು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಹೇಳಿದರು.

ಅವರು ಇಂದು ಮಣಿಪಾಲದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಲ ಜೀವನ್ ಮಿಷನ್ ಕಾರ್ಯಕ್ರಮವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, 2023 ನೇ ಸಾಲಿನ ಒಳಗಾಗಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಎಲ್ಲಾ ಮನೆಗಳಿಗೆ ನಳ್ಳಿ ನೀರಿನ ಸಂಪರ್ಕ ಕಲ್ಪಿಸುವ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಜಲಮೂಲಗಳ ಲಭ್ಯತೆಯ ಆಧಾರದಲ್ಲಿ ನೀರು ಸರಬರಾಜು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವಂತೆ ತಿಳಿಸಿದರು.

ಕಾಪು ತಾಲೂಕಿನ ಕುರ್ಕಾಲು, ಮೂಡಬೆಟ್ಟು, ಇನ್ನಂಜೆ, ಪಾಂಗಾಳ, ಏಣಗುಡ್ಡೆ, ಮಟ್ಟು ಮತ್ತು ಕೋಟೆ ಗ್ರಾಮಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮೂಲಕ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಿಂದ ಏಕಗ್ರಾಮ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಬಿ.ಟಿ.ಮೋಹನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿಮಗೆ ಪ್ಯಾಷನ್ ಇದೆಯೇ?

ಸುಬ್ಬನಿಗೆ ಗಾಯಕನಾಗುವ ಆಸೆ. ಸುಬ್ಬಿಗೆ ನರ್ತಕಿಯಾಗುವ ಆಸೆ. ಆದರೆ ಇಬ್ಬರಲ್ಲಿ ವ್ಯತ್ಯಾಸವಿದೆ....

ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಾಗಾರ

ಉಡುಪಿ, ಜ.23: ಪ್ರವಾಸೋದ್ಯಮ ಇಲಾಖೆ ವತಿಯಿಂದ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ...
error: Content is protected !!