ಉಡುಪಿ: ಜಿಲ್ಲೆಯಲ್ಲಿ ಸೆಪ್ಟಂಬರ್ 27 ರಂದು ಈ ಕೆಳಕಂಡ ವ್ಯಾಪ್ತಿಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಉಡುಪಿಯ 110/33/11 ಕೆವಿ ನಿಟ್ಟೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಬನ್ನಂಜೆ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬ್ರಹ್ಮಗಿರಿ, ಕಾನ್ವೆಂಟ್ ರಸ್ತೆ, ಕಾಡಬೆಟ್ಟು, ಪ್ರಗತಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ, 110/11ಕೆವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಕಲ್ಯಾಣಪುರ, ಶಾಂತಿವನ ಮತ್ತು ಪುತ್ತೂರು ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಗೋಪಾಲಪುರ, ಶಾಂತಿವನ, ಗರಡಿಮಜಲು, ಪುತ್ತೂರು, ಅಂಬಾಗಿಲು, ಪೆರಂಪಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಕಾರ್ಕಳದ 220/110/11ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್ ಗಳಾದ ನಿಟ್ಟೆ, ಕಲ್ಯಾ, ಲೆಮಿನಾ ಹಾಗೂ 110/11 ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ ಪದವು ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಫ್ಲೈ, ಬೊರ್ಗಲ್ ಗುಡ್ಡೆ, ಲೆಮಿನಾ ಇಂಡಸ್ಟ್ರಿಸ್, ದೂಪದಕಟ್ಟೆ, ಕೆಮ್ಮಣ್ಣು, ನೆಲ್ಲಿಗುಡ್ಡೆ, ಬೇಲಾಡಿ, ಬಾರಾಡಿ ಕಲ್ಯಾ, ಬೋಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.
110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕೆ.ಎಂ.ಎಫ್ ಫೀಡರಿನಲ್ಲಿ ಹಾಗೂ 110/33/11ಕೆವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಪೆರ್ಡೂರು ಫೀಡರಿನಲ್ಲಿ ಮೆಂಟೆನೆನ್ಸ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈಶ್ವರನಗರ, ಸರಳೇಬೆಟ್ಟು, ಅರ್ಬಿ, ಪ್ರಗತಿನಗರ, 80 ಬಡಗುಬೆಟ್ಟು, ಪುತ್ತಿಗೆ, ಪಕ್ಕಾಲು, ಪೆರ್ಡೂರು ಪೇಟೆ, ಮುತ್ತೂರ್ಮೆ, ಕುಕ್ಕೆಹಳ್ಳಿ, ಪಾಡಿಗಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಹೆಬ್ರಿಯ ಬೆಳೆಂಜೆ 33/11 ಕೆವಿ ಹೆಬ್ರಿ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11ಕೆವಿ ಬೇಳೆಂಜೆ ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೇಳೆಂಜೆ, ಮಡಾಮಕ್ಕಿ, ಕಾಸನಮಕ್ಕಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.