ಉಡುಪಿ: ವನ್ಯಜೀವಿ ಸಪ್ತಾಹ ಅಂಗವಾಗಿ ಕುದುರೆಮುಖ ವನ್ಯಜೀವಿ ವಿಭಾಗದ ವತಿಯಿಂದ ಕಾರ್ಕಳ ಪೆರ್ವಾಜೆಯ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ವಿವಿಧ ವಲಯ ಮಟ್ಟಗಳ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪರಿಸರ, ವನ್ಯಜೀವಿ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವ ವಿವಿಧ ಸ್ಫರ್ಧೆಗಳು ನಡೆಯಿತು.
ಕರ್ನಾಟಕ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ವನ್ಯಜೀವಿ ಸಪ್ತಾಹ ಕಾರ್ಯಕ್ರಮಗಳ ಮಹತ್ವ, ವನ್ಯಜೀವಿ, ಪರಿಸರ ಸಂರಕ್ಷಣೆ ಕುರಿತು ಮಾಹಿತಿ ನೀಡಿದರು. ಮಂಗಳೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್.ಎಸ್.ನೇಟಾಲ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಅಜಿತ್ ಪಾಟೀಲ್, ಪೆರ್ವಾಜೆ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಸಂಯುಕ್ತ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಹರ್ಷಿಣ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಪೂಜಾರಿ ಸ್ವಾಗತಿಸಿ, ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ಗಣಪತಿ ನಾಯ್ಕ ವಂದಿಸಿದರು. ಉಪ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ಕೆ ನಿರೂಪಿಸಿದರು.