ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ರಾಷ್ಟೀಯ ವಿದ್ಯಾರ್ಥಿವೇತನ ಪೋರ್ಟಲ್‌ನಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅಕ್ಟೋಬರ್ 15 ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://dom.karnataka.gov.in/udupi/public, ಸಹಾಯವಾಣಿ ಸಂಖ್ಯೆ 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ : 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.