ನವದೆಹಲಿ: ಬೆಟ್ಟಿಂಗ್ ಜಾಹೀರಾತುದಾರರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ. ವೆಬ್ ಸೈಟ್, ಟಿವಿ ಚ್ಯಾನಲ್ ಗಳಲ್ಲಿ ಬೆಟ್ಟಿಂಗ್ ಜಾಹೀರಾತು ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಬೆಟ್ಟಿಂಗ್ ಸೈಟ್ಗಳ ಜಾಹೀರಾತುಗಳನ್ನು ಪ್ರಸಾರ ಮಾಡದಂತೆ ಸುದ್ದಿ ವೆಬ್ಸೈಟ್ಗಳು, ಒಟಿಟಿ ಪ್ಲಾಟ್ಫಾರ್ಮ್ಗಳು ಮತ್ತು ಖಾಸಗಿ ಚಾನೆಲ್ಗಳಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಪ್ರಕಟಣೆಯ ಮೂಲಕ ಸೂಚನೆ ನೀಡಿದೆ. ಡಿಜಿಟಲ್ ಮಾಧ್ಯಮಗಳಾದ ನೆಟ್ಫ್ಲಿಕ್ಸ್, ಹಾಟ್ಸ್ಟಾರ್, ಅಮೆಜಾನ್ ಪ್ರೈಮ್ ವೀಡಿಯೋ ಸೇರಿದಂತೆ ಇತರ ಡಿಜಿಟಲ್ ಮಾಧ್ಯಮಗಳಿಗೂ ಇದು ಅನ್ವಯಿಸುತ್ತದೆ.
ಇಂತಹ ಜಾಹೀರಾತುಗಳು ಜೂಜು ಮತ್ತು ಬೆಟ್ಟಿಂಗ್ ಕುರಿತಾಗಿ ಸಾರ್ವಜನಿಕರನ್ನು ಉತ್ತೇಜಿಸುತ್ತಿರುವ ಹಿನ್ನೆಲೆಯಲ್ಲಿ ಈ ರೀತಿಯ ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ತಕ್ಷಣವೇ ನಿಲ್ಲಿಸಬೇಕು. ನಿಲ್ಲಿಸದಿದ್ದರೆ ಭಾರಿ ದಂಡ ಹಾಕಿ ಕಾನೂನಿನ ಅಡಿಯಲ್ಲಿ ಶಿಸ್ತು ಕ್ರಮದ ಎಚ್ಚರಿಕೆಯನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನೀಡಿದೆ.