ಬೆಂಗಳೂರು: ರಾಜ್ಯದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತೆ ಪಬ್ಲಿಕ್ ಪರೀಕ್ಷೆ ನಡೆಯುವ ಸಾಧ್ಯತೆ ಇದೆಯೇ? 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸುತ್ತಿದೆ.
ಇದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 12 ರಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಉನ್ನತ ಮಟ್ಟದ ಸಭೆಯಲ್ಲಿ ಹೆಚ್ಚಿನ ಚರ್ಚೆಗಳು ಆಗುವ ಸಾಧ್ಯತೆಗಳಿದ್ದು ಯಾವ ವರ್ಷದಿಂದ ಮತ್ತು ಯಾವ ರೀತಿ ಪರೀಕ್ಷೆಗಳನ್ನು ನಡೆಸಬೇಕು ಎಂಬಿತ್ಯಾದಿ ಅಂಶಗಳ ಬಗ್ಗೆ ವಿಸ್ತ್ರತ ಚರ್ಚೆಗಳು ನಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.