ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದಲ್ಲಿ ಮಳೆ ಇನ್ನಷ್ಟು ಬಿರುಸುಗೊಳ್ಳಲಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ 2 ದಿನ ಭಾರಿ ಮಳೆಯಾಗಲಿದೆ.
ರಾಯಚೂರು, ಬಾಗಲಕೋಟೆ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂ.ಗ್ರಾಮಾಂತರ, ಬೆಳಗಾವಿ, ಗದಗ, ಕಲಬುರಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ಚಾಮರಾಜನಗರದಲ್ಲಿ ಸೋಮವಾರ ಮತ್ತು ಮಂಗಳವಾರ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಹಾಗೂ ಮಲೆನಾಡಿನಲ್ಲೂ ಚದುರಿದಂತೆ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.