Saturday, November 23, 2024
Saturday, November 23, 2024

ನಂದಳಿಕೆಯಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆ

ನಂದಳಿಕೆಯಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆ

Date:

ಕಾರ್ಕಳ: ಉಡುಪಿ ಜಿಲ್ಲೆ, ಕಾರ್ಕಳ ತಾಲೂಕಿನ, ಕೈಯಾರ್ಲದ ಶ್ರೀ ಮಹಾಕಾಳಿ ದೇವಾಲಯದ ಸಮೀಪದಲ್ಲಿನ ನಾಗಬನದಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆಯಾಗಿದೆಯೆಂದು, ಶಿರ್ವದ ಎಂ.ಎಸ್.ಆರ್.ಎಸ್. ಕಾಲೇಜಿನ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಆಯತಾಕಾರದ ಬಳಪದ ಶಿಲೆಯ ಕೆಳಭಾಗದಲ್ಲಿ ಕಾಲುಮಂಡಲದ ನಾಲ್ಕು ಪವಿತ್ರ ಗಂಟುಗಳನ್ನು ಒಳಗೊಂಡ ಒಂದು ನಾಗರಾಜನ ಶಿಲ್ಪವನ್ನು ರಚಿಸಲಾಗಿದ್ದು, ನಾಗನ ಹೆಡೆಯ ಮೇಲೆ ಚರ್ತುಭಾಹು ನಾಗಭೈರನ ಶಿಲ್ಪವನ್ನು ನಿಂತಂತೆ ರಚಿಸಲಾಗಿದೆ. ಹಿಂದಿನ ಎರಡು ಕೈಗಳಲ್ಲಿ ಎರಡು ಹೆಡೆಬಿಚ್ಚಿದ ನಾಗಗಳನ್ನು ಹಿಡಿದಂತೆ ಚಿತ್ರಿಸಲಾಗಿದೆ.

ಮುಂದಿನ ಬಲಗೈಯಲ್ಲಿ ನಾಗ ದಂಡವಿದೆ, ಎಡಗೈಯಲ್ಲಿ ರುಂಡವಿದೆ. ನಾಗಭೈರವ ಶಿಲ್ಪದ ಎಡ-ಬಲಗಳಲ್ಲಿ ಹೆಡೆಬಿಚ್ಚಿದ ನಾಗಗಳನ್ನು ಕೈಯಲ್ಲಿ ಹಿಡಿದ ನಾಗ ಕನ್ನಿಕೆಯರ ಶಿಲ್ಪಗಳಿವೆ. ನಾಗಭೈರವನ ತಲೆಯ ಮೇಲೆ ಐದು ಹೆಡೆಗಳ ನಾಗಕೊಡೆಯಿದೆ. ಜನಿವಾರ ಮತ್ತು ಮತ್ತು ಸೊಂಟದ ಕೆಳಗೆ ಅರೆಪಂಚೆಯ ಅಲಂಕಾರವಿದೆ.

ಶುದ್ಧ ಜನಪದ ಶೈಲಿಯಲ್ಲಿ ರಚಿತವಾಗಿರುವ ಈ ಶಿಲ್ಪ ಸುಮಾರು 14-15 ನೇ ಶತಮಾನದ ಜೈನ ನಾಗಶಿಲ್ಪವಾಗಿದೆ. ಈ ಶಿಲ್ಪದ ಅಧ್ಯಯನದಲ್ಲಿ ದೇವಾಲಯದ ಅರ್ಚಕರಾದ ಕಿರಣ್ ಚೌಟ, ಆಡಳತಾಧಿಕಾರಿ ಚಂದ್ರಹಾಸ ಚೌಟ, ವಿದ್ಯಾರ್ಥಿಗಳಾದ ಶ್ರೇಯಸ್, ಕಾರ್ತಿಕ್, ಗೌತಮ್, ದಿಶಾಂತ್ ಸಹಕರಿಸಿದ್ದಾರೆ ಎಂದು ಪ್ರೊ.ಟಿ.ಮುರುಗೇಶಿಯವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...

ಅರುಣ್ಯಾ 2024: ಭಂಡಾರಕಾರ್ಸ್ ಪಿಯು ಕಾಲೇಜು ತಂಡ ಚಾಂಪಿಯನ್

ಬಸ್ರೂರು, ನ.22: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾಮಟ್ಟದ...
error: Content is protected !!