ಉಡುಪಿ: ಗ್ರಾಮ ಪಂಚಾಯತ್ ಬೈರಂಪಳ್ಳಿ, ಕ್ಷಯ ರೋಗ ನಿರ್ಮೂಲನ ಕೇಂದ್ರ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕೆಹಳ್ಳಿ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಬೈರಂಪಳ್ಳಿ,41ನೇ ಶೀರೂರ್ ಮತ್ತು ಬೆಳ್ಳಾರ್ಪಡಿ ಆಶ್ರಯದಲ್ಲಿ ಕ್ಷಯ ಮುಕ್ತ ಗ್ರಾಮ ಅಭಿಯಾನ ಮತ್ತು ಕರಪತ್ರ ಬಿಡುಗಡೆ ಕಾರ್ಯಕ್ರಮ ಬೈರಂಪಳ್ಳಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಎಸ್. ಜಿಯಾನಂದ ಹೆಗ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕೆಹಳ್ಳಿಯ ವೈದ್ಯಾಧಿಕಾರಿಗಳಾದ ಡಾ. ಅರ್ಚನಾ ಹೆಗ್ಡೆ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ತಾಲೂಕು ಆರೋಗ್ಯ ಕಛೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್ ಮಾತನಾಡಿ, ಕ್ಷಯ ರೋಗ ನಿರ್ಮೂಲನೆಯಲ್ಲಿ ಯಾವ ರೀತಿಯಾಗಿ ಸಾಗಿದರೆ ಒಳಿತು ಎನ್ನುವುದನ್ನು ತಿಳಿಸಿದರು. ಜಿಲ್ಲಾ ಕ್ಷಯರೋಗ ನಿರ್ಮೂಲನಾ ಘಟಕದ ತಾಲೂಕು ಮೇಲ್ವಿಚಾರಕರಾದ ಪ್ರಶಾಂತ್ ಶೆಟ್ಟಿ ಪರಪ್ಪಾಡಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.
ತಾಲ್ಲೂಕು ಹಿರಿಯ ಪ್ರಾಥಮಿಕ ಸುರಕ್ಷಾಧಿಕಾರಿ, ಜಿಲ್ಲಾ ಆಶಾ ಮೆಂಟರ್, ಶೀರೂರ್ ಆಯುರ್ವೇದ ವೈದ್ಯಾಧಿಕಾರಿ, ಉಪಾಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು, ಸ್ಥಳೀಯರು, ಅರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಸಂಜೀವಿನಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು. ಸಮುದಾಯ ಆರೋಗ್ಯ ಅಧಿಕಾರಿ ಸೌಮ್ಯ ಸ್ವಾಗತಿಸಿ, ಪ್ರಾಥಮಿಕ ಅರೋಗ್ಯ ಸುರಕ್ಷಾಧಿಕಾರಿ ಕಲಾವತಿ ಬಿ ಕಾರ್ಯಕ್ರಮ ನಿರೂಪಿಸಿದರು.