Friday, September 20, 2024
Friday, September 20, 2024

ಇಂದ್ರಾಳಿ ರಸ್ತೆ ದುರಸ್ತಿ – ಬದಲಿ ಮಾರ್ಗ ಬಳಕೆಗೆ ಸೂಚನೆ

ಇಂದ್ರಾಳಿ ರಸ್ತೆ ದುರಸ್ತಿ – ಬದಲಿ ಮಾರ್ಗ ಬಳಕೆಗೆ ಸೂಚನೆ

Date:

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಕಿ.ಮೀ 76.040 ರಿಂದ ಕಿ.ಮೀ 85.200 ವರೆಗೆ ಚತುಷ್ಪಥ ಕಾಮಗಾರಿ ಇಂದ್ರಾಳಿ ರೈಲ್ವೇ ಸೇತುವೆ ಬಳಿ ಬಾಕಿ ಇರುವ ಕಾಂಕ್ರೀಟೀಕರಣ ಕಾಮಗಾರಿ ಭರದಿಂದ ನಡೆಯುತ್ತಿದ್ದು, ಇಂದ್ರಾಳಿ ರೇಲ್ವೆ ಸೇತುವ ಮೂಲಕ ಭಾರೀ ವಾಹನ ಸಂಚಾರವನ್ನು ಕಡ್ಡಾಯವಾಗಿ ನಿರ್ಬಂಧಿಸಿದ್ದು, ವಾಹನಗಳ ದಟ್ಟಣಿಕೆಯಿಂದ ಸುಗಮ ಸಂಚಾರಕ್ಕೆ ಉಳಿದ ವಾಹನಗಳಿಗೆ ಅಡಚಣೆಯಗುತ್ತಿರುವ ಹಿನ್ನಲೆ ಇತರ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕೆಂದು ಸೂಚಿಸಲಾಗಿದೆ.

ಕುಂದಾಪುರ ಕಡೆಯಿಂದ ಬರುವ ಘನವಾಹನಗಳು ಅಂಬಾಗಿಲು-ಪೆರಂಪಳ್ಳಿ-ಮಣಿಪಾಲ ರಸ್ತೆಯ ಮೂಲಕ ಚಲಿಸುವುದು. ಉಡುಪಿಯಿಂದ ಬರುವ ಘನವಾಹನಗಳು ಕಲ್ಸಂಕ ಜಂಕ್ಷನ್ ಬಳಿ ಎಡ ತಿರುವು ಪಡೆದು ಗುಂಡಿಬೈಲು ರಸ್ತೆ ಮೂಲಕ ಎ.ವಿ ಬಾಳಿಗ ಆಸ್ಪತ್ರೆ ಬಳಿಯಿಂದ ಪೆರಂಪಳ್ಳಿ ರಸ್ತೆಯ ಮೂಲಕ ಮಣಿಪಾಲಕ್ಕೆ ಚಲಿಸುವುದು.

ಕಾರ್ಕಳ, ಹಿರಿಯಡ್ಕದಿಂದ ಬರುವ ಘನ ವಾಹನಗಳು ಮಣಿಪಾಲ-ಪರಂಪಳ್ಳಿ-ಅಂಬಾಗಿಲು ರಸ್ತೆಯ ಮೂಲಕ ಚಲಿಸುವುದು. ಉಡುಪಿಯಿಂದ ಮಣಿಪಾಲಕ್ಕೆ ಚಲಿಸುವ ದ್ವಿಚಕ್ರ ವಾಹನ, ಕಾರುಗಳು ಮತ್ತು ಬಸ್ಸುಗಳು ಹಾಲಿ ಇಂದ್ರಾಳಿ ಸೇತುವೆ ಮೇಲೆ ಏಕಮುಖ ನಿರ್ಬಂಧಿತ ರೀತಿಯಲ್ಲಿ ಚಲಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!