ಉಡುಪಿ: ಅಯೋಧ್ಯ ಶ್ರೀ ರಾಮಚಂದ್ರನ ದಿಗ್ವಿಜಯ ಯಾತ್ರೆಯ ಪೂರ್ವ ತಯಾರಿ ಬೈಠಕ್ ಅಮೃತ ಗಾರ್ಡನ್ ಸಭಾಂಗಣದಲ್ಲಿ ನಡೆಯಿತು.
26 ರಾಜ್ಯಗಳನ್ನು ದಾಟಿ ಬರುವ ಯಾತ್ರೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚಾಲನೆಯನ್ನು ನೀಡಿದ್ದು, ಈ ಯಾತ್ರೆಯು ನವೆಂಬರ್ 7 ರಂದು ಉಡುಪಿ ಜಿಲ್ಲೆಗೆ ಬರಲಿದ್ದು ಇದಕ್ಕೆ ಪೂರ್ವ ತಯಾರಿಗಾಗಿ ಸಮಿತಿಯನ್ನು ರಚಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ವಿಜಯ ಕೊಡವೂರು, ಅಯೋಧ್ಯ ರಾಮ ಮಂದಿರ ನಿರ್ಮಾಣಕ್ಕಾಗಿ ನಮ್ಮ ಹಿರಿಯರು ಜೀವನವನ್ನೇ ನೀಡಿದ್ದಾರೆ, ಜೊತೆಯಾಗಿ ಸಂಘಟಿತವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಾರ್ಗದರ್ಶನದಲ್ಲಿ ವಿಶ್ವ ಹಿಂದೂ ಪರಿಷತ್ ಮುಂದಾಳತ್ವದಲ್ಲಿ ಈ ಒಂದು ಹೋರಾಟಕ್ಕೆ ಕಿಚ್ಚನ್ನು ನೀಡಿ ನಮ್ಮ ಹಿರಿಯರು ಅದನ್ನು ಉಳಿಸುವ ಪ್ರಯತ್ನವನ್ನು ಮಾಡಿದ್ದಾರೆ.
ಕಾನೂನಾತ್ಮಕವಾಗಿ ಲಕ್ಷಾಂತರ ಜನ ಹೋರಾಟ ಮಾಡಿದ್ದಾರೆ. ಅಯೋಧ್ಯೆಯ ದಿಗ್ವಿಜಯ ಯಾತ್ರೆಯ ಸಂದರ್ಭದಲ್ಲಿ ನಾವು ಎಲ್ಲಾ ಸಂಘ ಸಂಸ್ಥೆ / ಭಜನಾ ತಂಡ / ಧಾರ್ಮಿಕ ಶ್ರದ್ಧಾ ಕೇಂದ್ರದ ಮುಖಾಂತರ ರಾಮನ ಮೂರ್ತಿಗೆ ಹಾಲಿನ ಅಭಿಷೇಕ ಮಾಡುವಂತಹ ಅವಕಾಶವಿದೆ. ಶ್ರೀ ಶ್ರೀ ಶ್ರೀ ಶಕ್ತಿ ಶಂತಾನಂದ ಮಹರ್ಷಿ ಇವರ ಮಾರ್ಗದರ್ಶನದಲ್ಲಿ ಧಾರ್ಮಿಕ ಸಭೆ ನಡೆಯಲಿದೆ.
ಹಿಂದೂ ಸಮಾಜದ ಎಲ್ಲಾ ಬಂಧುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಚಂದಗಾಣಿಸಿಕೊಡಬೇಕು ಮತ್ತು ಕೇವಲ ಮಂದಿರ ನಿರ್ಮಾಣ ಮಾತ್ರವಲ್ಲ ಜೊತೆಗೆ ರಾಮಾರಾಜ್ಯದ ನಿರ್ಮಾಣವಾಗಬೇಕಾಗಿದೆ.
ಹತ್ತು ಸಾವಿರ ಮಂದಿ ಧಾರ್ಮಿಕ ಸಭೆಗೆ ಸೇರುವ ನಿರೀಕ್ಷೆಯಿದೆ. ತದನಂತರ ವಾಹನ ಜಾಥದ ಮುಖಾಂತರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದವರೆಗೆ ಯಾತ್ರೆ ಸಂಚರಿಸಿ ಅಲ್ಲಿ ಆಶೀರ್ವಚನ ನಡೆಯಲಿದೆ ಎಂದರು.
ಈ ಸಂದರ್ಭದಲ್ಲಿ ಪುರುಷೋತ್ತಮ ಶೆಟ್ಟಿ, ಹರಿಯಪ್ಪ ಕೋಟ್ಯಾನ್, ಪಾಂಡುರಂಗ ಮಲ್ಪೆ, ರಾಘವೇಂದ್ರ ಕುಂದರ್, ಮನೋಹರ್ ಶೆಟ್ಟಿ ತೋನ್ಸೆ, ರಾಧಾಕೃಷ್ಣ ಮೆಂಡನ್ ಮಲ್ಪೆ, ತಾರಾ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು. ದಾಮೋದರ ಶರ್ಮ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.