ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳ ವಿದ್ಯಾರ್ಥಿನಿಲಯ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಸಮುದಾಯಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್ಸೈಟ್ http://www.bcwd.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-8050370006 ಅಥವಾ ಜಿಲ್ಲಾ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.