Friday, September 20, 2024
Friday, September 20, 2024

ಛಾಯಾ ಧರ್ಮ ಜಾಗೃತಿ ಅಭಿಯಾನಕ್ಕೆ ಚಾಲನೆ

ಛಾಯಾ ಧರ್ಮ ಜಾಗೃತಿ ಅಭಿಯಾನಕ್ಕೆ ಚಾಲನೆ

Date:

ಉಡುಪಿ: ನಮಗೆ ಕಷ್ಟ ಬಂದಾಗ ಸ್ಮರಿಸಿ ಪೂಜಿಸಿ ಆರಾಧಿಸುವ ದೇವರುಗಳ ಮೂರ್ತಿ, ಮನೆ ಮಂದಿರಗಳನ್ನು ನಿರ್ಮಿಸುವಾಗ ಇದ್ದ ನಮ್ಮಿಷ್ಟದ ದೇವರ ಛಾಯಾ ಚಿತ್ರ ಮುಂತಾದ ಹತ್ತು ಹಲವು ಧಾರ್ಮಿಕ ಭಾವನೆಗಳುಳ್ಳ ಮೂರ್ತಿ ಹಾಗೂ ಛಾಯಾಚಿತ್ರಗಳನ್ನು ತಮ್ಮ ಗೃಹಗಳನ್ನು ನವೀಕರಿಸುವ ಸಂದರ್ಭದಲ್ಲಿ ಇಲ್ಲವೇ ಪೂಜಿಸುತ್ತಿದ್ದ ಮೂರ್ತಿಗಳ ಕೈ ಕಾಲುಗಳು ಭಗ್ನಗೊಂಡಾಗ ಅವನ್ನು ದಾರಿ ಬದಿ ಇಲ್ಲವೇ ಯಾವುದೇ ಮರದ ಬದಿ ಎಸೆಯದೆ ಸೂಕ್ತ ಸ್ಥಳಗಳಲ್ಲಿ ಸೂಕ್ತ ರೀತಿಯಲ್ಲಿ ವಿವೇವಾರಿ ಮಾಡುವುದು ನಮ್ಮ ಧರ್ಮ ಜಾಗೃತಿ ಮಾತ್ರವಲ್ಲ ಕರ್ತವ್ಯ ಕೂಡ ಆಗಿದೆ ಎಂದು ನಗರಸಭಾ ಸದಸ್ಯ ವಿಜಯ ಕೊಡವೂರು ಅಭಿಪ್ರಾಯಪಟ್ಟರು‌.

ಅವರು ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಷನ್ ಉಡುಪಿ ವಲಯ, ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ ಹಾಗು ಉಡುಪಿ ಜಿಲ್ಲಾ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಸಂಯುಕ್ತವಾಗಿ ‘ಛಾಯಾ ಧರ್ಮ ಜಾಗೃತಿ’ ಎಂಬ ವಿನೂತನ ಪರಿಕಲ್ಪನೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ತಮ್ಮ ವೃತ್ತಿಯನ್ನು ಪ್ರೀತಿಸಿ ಗೌರವಿಸಿ ದೇವರ ಸ್ವರೂಪದ ಛಾಯಾಚಿತ್ರಗಳಿಗೆ ಸೂಕ್ತ ರೀತಿಯಲ್ಲಿ ಅದನ್ನು ವಿಂಗಡಿಸುತ್ತಿರುವ ಛಾಯಾಚಿತ್ರಗಾರರನ್ನು ಶ್ಲಾಘಿಸಿದರು. ಈ ಬಗ್ಗೆ ಮಾಹಿತಿ ಮತ್ತು ಅಭಿಯಾನಕ್ಕಾಗಿ ಈಗಾಗಲೇ ಕೆಲವು ಸ್ಥಳವನ್ನು ಗುರುತಿಸಲಾಗಿದೆ. ರಸ್ತೆ ಬದಿ ಇರುವ ಎಲ್ಲ ದೇವರ ಫೋಟೋಗಳನ್ನು ವ್ಯವಸ್ಥಿತವಾಗಿ ತೆರವುಗೊಳಿಸಿ ಈ ಬಗ್ಗೆ ಮಾಹಿತಿ ಇರುವ ಬೋರ್ಡ್ ಅಳವಡಿಸಲಾಯಿತು.

ಪ್ರತಿವಾರ ನಿರಂತರ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎರಡು ದಿನದಲ್ಲಿ ಸುಮಾರು ೨೦ ಕಟ್ಟೆಯಲ್ಲಿ ಇರಿಸಿದ್ದ ಫೋಟೋಗಳನ್ನು ತೆರವುಗೊಳಿಸಿ ಕಟ್ಟೆಯನ್ನು ಶುಚಿಗೊಳಿಸಲಾಯಿತು. ಈ ಸಂದರ್ಭದಲ್ಲಿ ವಾಮನ ಪಡುಕೆರೆ, ಸಂತೋಷ್ ಪಂದುಬೆಟ್ಟು, ಪ್ರವೀಣ್ ಕೊರೆಯ, ಸುಕೇಶ್ ಅಮೀನ್, ಸಂತೋಷ್ ಕೊರಂಗ್ರಪಾಡಿ, ಪೂರ್ಣಿಮಾ ಜನಾರ್ದನ್, ಶಿವಪ್ರಸಾದ್ ಬೆಳ್ಕಳೆ, ಸುಶಾಂತ್ ಕೆರೆಮಠ, ಪ್ರಜ್ವಲ್ ಕಟಪಾಡಿ, ಪ್ರಕಾಶ್ ಕೊಡಂಕೂರು, ಕೆ. ವಾಸುದೇವ ರಾವ್, ನಿದೇಶ್ ಕುಮಾರ್, ಸಿದ್ಧಬಸಯ್ಯ ಸ್ವಾಮಿ ಚಿಕ್ಕ ಮಠ ಉಪಸ್ಥಿತರಿದ್ದರು. ಅಧ್ಯಕ್ಷ ಜನಾರ್ದನ್ ಕೊಡವೂರು ಸ್ವಾಗತಿಸಿ, ಛಾಯಾಧರ್ಮ ಜಾಗೃತಿಯ ಸಂಚಾಲಕ ಸುರಭಿ ರತನ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!