ಉಡುಪಿ: ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಬೈಂದೂರು ತಾಲೂಕು ಕಾಲ್ತೋಡು ಗ್ರಾಮ ಪಂಚಾಯತ್, ಬ್ರಹ್ಮಾವರ ತಾಲೂಕು ಯಡ್ತಾಡಿ ಹಾಗೂ ಉಪ್ಪೂರು ಗ್ರಾಮ ಪಂಚಾಯತ್ ಮತ್ತು ಕಾಪು ತಾಲೂಕು ಮುದರಂಗಡಿ ಗ್ರಾಮ ಪಂಚಾಯತ್ನ ಸದಸ್ಯ ಸ್ಥಾನಗಳಿಗೆ ಅಕ್ಟೋಬರ್ 28 ರಂದು ಮತದಾನ ನಡೆಯಲಿರುವ ಹಿನ್ನೆಲೆ, ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮತ್ತು ಸಾರ್ವಜನಿಕರು ಮತ ಹಾಕಲು ಅನುಕೂಲವಾಗುವಂತೆ ಮತದಾನದ ದಿನದಂದು ಈ ಮೇಲ್ಕಂಡ ವ್ಯಾಪ್ತಿಯ ಪ್ರದೇಶಗಳಲ್ಲಿ ಸಂತೆ, ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.
ಗ್ರಾ.ಪಂ. ಚುನಾವಣೆ: ಸಂತೆ, ಜಾತ್ರೆ ನಿಷೇಧ
ಗ್ರಾ.ಪಂ. ಚುನಾವಣೆ: ಸಂತೆ, ಜಾತ್ರೆ ನಿಷೇಧ
Date: