ಉಡುಪಿ: ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿ. ಮಂಗಳೂರು ಮತ್ತು ಮಹಾಲಕ್ಷ್ಮೀ ಬ್ಯಾಂಕ್ ಲಿ. ಉಡುಪಿ ಇದರ ವತಿಯಿಂದ ಮಲ್ಪೆ ಮೀನುಗಾರರ ಸಂಘದ ಸಹಕಾರದೊಂದಿಗೆ ಅಕ್ಟೋಬರ್ 28 ಪೂರ್ವಾಹ್ನ 10 ಗಂಟೆಗೆ ಮಲ್ಪೆ ಅರಬ್ಬಿ ಸಮುದ್ರ ಮಧ್ಯದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಆಯೋಜಿಸಿರುವುದಾಗಿ ಫೆಡರೇಷನ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
67ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮ ಉತ್ಸಾಹದಿಂದ ಅರ್ಥಪೂರ್ಣವಾಗಿ ಆಯೋಜಿಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನೀಲ್ ಕುಮಾರ್ ರವರ ಕಲ್ಪನೆಯ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಅಭಿಯಾನಕ್ಕೆ ಈ ಕಾರ್ಯಕ್ರಮ ಮೆರುಗು ನೀಡಲಿದೆ.
ಸಮುದ್ರ ಮಧ್ಯದಲ್ಲಿ ಶಾಲಾ ವಿದ್ಯಾರ್ಥಿಗಳು, ಮೀನುಗಾರರು, ಜನಪ್ರತಿನಿಧಿಗಳು, ಜಿಲ್ಲಾಡಳಿತದ ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು, ಸಂಗೀತ ಕಲಾವಿದರು ಹಾಗೂ ವಿವಿಧ ಕ್ಷೇತ್ರದ ಗಣ್ಯರ ಉಪಸ್ಥಿತಿಯಲ್ಲಿ ಕನ್ನಡ ಗೀತೆಗಳ ಗಾಯನದ ಮೂಲಕ ಕಾರ್ಯಕ್ರಮ ನಡೆಯಲಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದರೆ.