ಬೆಳ್ಮಣ್: ಪ್ರತಿಯೊಂದು ಸಾಧನೆಯೂ ಒಂದು ಕನಸಿನಿಂದ ಹುಟ್ಟಿಕೊಳ್ಳುತ್ತದೆ. ಅಂತಹ ನೂರಾರು ಕನಸನ್ನು ಹೊತ್ತಂತಹ ನಮ್ಮ ಗ್ರಾಮೀಣ ಭಾಗದ ಯುವ ಪ್ರತಿಭೆಗಳಿಗೆ ವಿವಿಧ ಕಾರ್ಯಕ್ರಮಗಳ ಮೂಲಕ ಅವರ ಪ್ರತಿಭೆ ಸೂಕ್ತ ವೇದಿಕೆ ನಿರ್ಮಿಸಲು ನಮ್ಮ ಸಂಸ್ಥೆಯೂ ಯೋಜನೆಯನ್ನು ರೂಪಿಸುತ್ತಿದೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಹೇಳಿದರು.
ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಆದಿತ್ಯವಾರ ಜರಗಿದ 23ನೇ ವರ್ಷದ ವರ್ಷಾಚರಣೆಯ ಪ್ರಯುಕ್ತ ಜರಗಿದ ‘ಕನಸು’ ವಿಶೇಷ ಕಾರ್ಯಕ್ರಮದ ಮೂಲಕ ಮಾತನಾಡಿದರು.
ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಮಾತನಾಡಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಂಸ್ಥೆಯೂ ಒಂದು ಕೇವಲ ಸಂಸ್ಥೆಯಾಗಿರದೇ ಸದಸ್ಯರೆಲ್ಲರಲ್ಲಿ ಭಾವನಾತ್ಮಕ ಕೌಟುಂಬಿಕ ಸಂಬಂಧ ನಿರ್ಮಿಸಿದೆ ಎಂದು ಹೇಳಿದರು.
ಸಂಘದ ಸಂಘದ ನಿಕಟ ಪೂರ್ವಾಧ್ಯಕ್ಷ ಉದಯ ಅಂಚನ್, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪೂಜಾರಿ ಬಿರೋಟ್ಟು, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಅಬ್ಬನಡ್ಕ, ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸ್ರಬೈಲು, ಕೋಶಾಧಿಕಾರಿ ಅಶ್ವಿನಿ ಪ್ರಭಾಕರ್, ಅಬ್ಬನಡ್ಕ ಶ್ರೀ ವನದುರ್ಗಾ ಸ್ವ- ಸಹಾಯ ಸಂಘದ ಅಧ್ಯಕ್ಷೆ ವೀಣಾ ಪೂಜಾರಿ, ಕಾರ್ಯದರ್ಶಿ ಪುಷ್ಪ ಕುಲಾಲ್, ಅಬ್ಬನಡ್ಕ ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಕಾರ್ಯದರ್ಶಿ ಕೀರ್ತನ್ ಕುಮಾರ್ ಮೊದಲಾದವರಿದ್ದರು.
ಸಂಘದ ಉಪಾಧ್ಯಕ್ಷೆ ಲೀಲಾ ಪೂಜಾರಿ ಸ್ವಾಗತಿಸಿ, ಪೂರ್ವಾಧ್ಯಕ್ಷ ಸತೀಶ್ ಅಬ್ಬನಡ್ಕ ವಂದಿಸಿದರು. ಕಾರ್ಯದರ್ಶಿ ಲಲಿತಾ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.