ಬೆಂಗಳೂರು: ಕಳೆದ ಎರಡು ತಿಂಗಳಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 50 ಲಕ್ಷಕ್ಕೂ ಹೆಚ್ಚು ಆಯುಷ್ಮಾನ್ ಕಾರ್ಡ್ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ರಾಜ್ಯದಾದ್ಯಂತ ಅರ್ಹ ಫಲಾನುಭವಿಗಳಿಗೆ ಸಮರೋಪಾದಿಯಲ್ಲಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ಗಳನ್ನು ವಿತರಿಸಿರುವ ನನ್ನ ಕರೆಗೆ ಓಗೊಟ್ಟು ಕಳೆದ 60 ದಿನಗಳಲ್ಲಿ ರಾಜ್ಯಾದ್ಯಂತ 50 ಲಕ್ಷಕ್ಕೂ ಹೆಚ್ಚು ಕಾರ್ಡ್ ವಿತರಿಸಿರುವ ಗ್ರಾಮ ಒನ್ ತಂಡಕ್ಕೆ ಅಭಿನಂದನೆಗಳು.
ಗ್ರಾಮೀಣ ಪ್ರದೇಶಗಳಲ್ಲಿ ಶೇ.100%ರಷ್ಟು ಫಲಾನುಭವಿಗಳಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸುವ ನಿಟ್ಟಿನಲ್ಲಿ ಗ್ರಾಮ ಒನ್ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಮುಂದಿನ 15 ದಿನಗಳಲ್ಲಿ ಒಂದು ಕೋಟಿ ಕಾರ್ಡ್ ವಿತರಣೆ ಪೂರ್ಣಗೊಳಿಸುವ ಗುರಿ ಹೊಂದಿದೆ. ಎಂದು ಆರೋಗ್ಯ ಸಚಿವರು ಟ್ವೀಟ್ ಮಾಡಿದ್ದಾರೆ.