ಬೆಳಗಾವಿ: ಕಿತ್ತೂರಿನ ಬಳಿಯಿರುವ ಕೆಐಎಡಿಬಿ ಪ್ರದೇಶದಲ್ಲಿ 1,000 ಎಕೆರೆ ಕೈಗಾರಿಕಾ ಟೌನ್ ಶಿಪ್ ನಿರ್ಮಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಿತ್ತೂರಿನ ಚನ್ನಮ್ಮ ಕೋಟೆ ಆವರಣದಲ್ಲಿ ರಾಜ್ಯಮಟ್ಟದ ಕಿತ್ತೂರು ಉತ್ಸವ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ನೂತನ ಕೈಗಾರಿಕಾ ಟೌನ್ ಶಿಪ್ ಯೋಜನೆಯಿಂದ ಸುಮಾರು 50 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಚೆನ್ನಮ್ಮ ಅರಮನೆ ನಿರ್ಮಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ 50 ಕೋಟಿ ಅನುದಾನ ನೀಡಿದ್ದರು. ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದಲ್ಲಿ ಇದೇ ಮೊದಲ ಬಾರಿಗೆ ಆಚರಿಸಲಾಗುತ್ತಿದೆ.
ಎರಡು ಪ್ರಮುಖ ನೀರಾವರಿ ಯೋಜನೆಗಳಾದ ಕೃಷ್ಣ ಮೇಲ್ದಂಡೆ ಸ್ಟೇಜ್ 3 ಯೋಜನೆ ವಿಚಾರ ನ್ಯಾಯಾಲಯದಲ್ಲಿದೆ. ಕಳಸಾ ಬಂಡೂರಿ ಯೋಜನೆ ಕೂಡ ಅಂತಿಮ ಹಂತದಲ್ಲಿದೆ. ಎರಡೂ ಪ್ರಮುಖ ಯೋಜನೆಗಳಿಗೆ ಒಪ್ಪಿಗೆ ಪಡೆದು ಶೀಘ್ರದಲ್ಲಿ ಕೆಲಸ ಪೂರ್ಣಗೊಳಿಸಲಾಗುವುದು ಎಂದರು.