Monday, November 25, 2024
Monday, November 25, 2024

ಮಲ್ಪೆ- ಕಸ್ತೂರ್ಬಾ ಆಸ್ಪತ್ರೆ ವತಿಯಿಂದ ಪಾರ್ಶ್ವವಾಯು ಆರೋಗ್ಯ ಜಾಗೃತಿ

ಮಲ್ಪೆ- ಕಸ್ತೂರ್ಬಾ ಆಸ್ಪತ್ರೆ ವತಿಯಿಂದ ಪಾರ್ಶ್ವವಾಯು ಆರೋಗ್ಯ ಜಾಗೃತಿ

Date:

ಮಣಿಪಾಲ: ವಿಶ್ವದಾದ್ಯಂತ ಪಾರ್ಶ್ವವಾಯು ಸಂಭವವನ್ನು ಕಡಿಮೆ ಮಾಡಲು ಪ್ರತಿ ವರ್ಷ ಅಕ್ಟೋಬರ್ 29 ರಂದು ವಿಶ್ವ ಪಾರ್ಶ್ವವಾಯು ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪಾರ್ಶ್ವವಾಯು ದಿನವು ಇದರಿಂದಾಗುವ ಗಂಭೀರ ಸ್ವರೂಪ ಮತ್ತು ಪಾರ್ಶ್ವವಾಯುವಿನ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಪಾರ್ಶ್ವವಾಯುವಿನ ಅಪಾಯದ ಅಂಶಗಳು ಮತ್ತು ಚಿಹ್ನೆಗಳ ಬಗ್ಗೆ ಉತ್ತಮ ಸಾರ್ವಜನಿಕ ಅರಿವಿನ ಮೂಲಕ ನಾವು ಪಾರ್ಶ್ವವಾಯುವಿನ ಹೊರೆಯನ್ನು ಕಡಿಮೆ ಮಾಡುವ ವಿಧಾನಗಳ ಕುರಿತು ಮಾತನಾಡಲು ಉತ್ತಮ ಅವಕಾಶವನ್ನು ಕಲ್ಪಿಸಿದೆ.

ಇದರ ಅಂಗವಾಗಿ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ನರವಿಜ್ಞಾನ ವಿಭಾಗವು ಮಲ್ಪೆ ಕಡಲ ತೀರದಲ್ಲಿ ಪಾರ್ಶ್ವವಾಯು ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಮರಳು ಕಲಾ ಶಿಲ್ಪವನ್ನು ಅನಾವರಣಗೊಳಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸಿತು.

ಕೆಎಂಸಿ ಮಣಿಪಾಲದ ಡೀನ್ ಡಾ. ಶರತ್ ಕೆ ರಾವ್ ಅವರು ಮರಳು ಕಲಾ ಶಿಲ್ಪವನ್ನು ಅನಾವರಣಗೊಳಿಸಿ ಮಾತನಾಡುತ್ತಾ, ಪಾರ್ಶ್ವವಾಯು ಅಂದರೆ ಮೆದುಳಿನ ರಕ್ತನಾಳದಲ್ಲಿ ರಕ್ತ ಹೆಪ್ಪುಗಟ್ಟಿ ಆ ಭಾಗವು ನಿಷ್ಕ್ರಿಯಗೊಳ್ಳುತ್ತದೆ. ಇದರಿಂದ ಶೇಕಡಾ 33 ರಷ್ಟು ಜನ ಸಾವನ್ನಪ್ಪುತ್ತಾರೆ ಹಾಗು ಇನ್ನೂ ಶೇಕಡಾ 33 ರಷ್ಟು ಜನ ಶಾಶ್ವತ ಅಂಗನ್ಯೂನತೆ ಹೊಂದುತ್ತಾರೆ. ಇದನ್ನು ನಿಯಂತ್ರಿಸಲು ಸಮತೋಲನ ಆಹಾರ ಹಾಗು ವ್ಯಾಯಾಮವು ಸಹಕಾರಿ ಎಂದರು.

ಈ ಸಾರ್ವಜನಿಕ ಜಾಗೃತಿ ಕಾರ್ಯಕ್ರಮದಲ್ಲಿ ತಿಳಿಸುವುದೇನೆಂದರೆ, ರೋಗಲಕ್ಷಣಗಳು ಕಂಡ 4.5 ಗಂಟೆಗಳ ಒಳಗೆ ಆಸ್ಪತ್ರೆಗೆ ಬಂದರೆ ಸಂಪೂರ್ಣ ಗುಣಮುಖರಾಗುವ ಸಾಧ್ಯತೆ ಹೆಚ್ಚಿದೆ.

ಮಾಹೆ ಮಣಿಪಾಲ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ. ಆನಂದ್ ವೇಣುಗೋಪಾಲ್, ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

ನರವಿಜ್ಞಾನ ವಿಭಾಗ ಮುಖ್ಯಸ್ಥರಾದ ಡಾ. ಅಪರ್ಣಾ ಆರ್ ಪೈ ಸ್ವಾಗತಿಸಿ, ನರಶಸ್ತ್ರಚಿಕಿತ್ಸಾ ವಿಭಾಗ ಮುಖ್ಯಸ್ಥರಾದ ಡಾ. ಗಿರೀಶ್ ಮೆನನ್ ಆರ್ ಅವರು ಪಾರ್ಶ್ವವಾಯು ಆರೋಗ್ಯ ಮತ್ತು ಪಾರ್ಶ್ವವಾಯು ದಿನದ ಕುರಿತು ಅವಲೋಕನವನ್ನು ನೀಡಿದರು. ಡಾ. ಶ್ರೀಪದ್ಮ ವಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!