Sunday, September 22, 2024
Sunday, September 22, 2024

‘ಹೊಳಪು-2022’ ಕ್ರೀಡಾಕೂಟದ ಲಾಂಛನ ಅನಾವರಣ

‘ಹೊಳಪು-2022’ ಕ್ರೀಡಾಕೂಟದ ಲಾಂಛನ ಅನಾವರಣ

Date:

ಕೋಟ: ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ ಸಹಯೋಗದಲ್ಲಿ ನಡೆಯುವ ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಜನಪ್ರತಿನಿಧಿಗಳ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಹೊಳಪು-2022 (ಜನಾಧಿಕಾರದ ಸಂಚಲನ) ಕಾರ್ಯಕ್ರಮದ ಲಾಂಛನವನ್ನು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಉಪಾಧ್ಯಕ್ಷರಾದ ಕಿರಣ್ ಕೊಡ್ಗಿ ಅವರು ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಅವರು, ಜನಪ್ರತಿನಿಧಿಗಳು ದಿನನಿತ್ಯ ರಾಜಕೀಯ-ಸರಕಾರಿ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಒತ್ತಡದಿಂದ ಇರುತ್ತಾರೆ. ಅವರು ಸಂಭ್ರಮದಿಂದ ಭಾಗವಹಿಸಲು ಇದೊಂದು ವೇದಿಕೆ, ಇಂತಹ ಕ್ರೀಡಾಕೂಟಗಳು ಪಂಚಾಯತ್‌ರಾಜ್ ವ್ಯವಸ್ಥೆಯ ವಿಕೇಂದ್ರಿಕರಣಕ್ಕೆ ಒಂದು ಹೆಜ್ಜೆಯಾಗಲಿದೆ ಎಂದರು.

ಕಾರಂತ ಪ್ರತಿಷ್ಠಾನ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ಮಾತನಾಡಿ, ಪಂಚಾಯತ್ ರಾಜ್ ವ್ಯವಸ್ಥೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಿದ್ದು ಪಕ್ಷಭೇದ ಮರೆತು ಉಡುಪಿ-ದಕ್ಷಿಣ ಕನ್ನಡದ 6000 ಕ್ಕೂ ಮಿಕ್ಕಿ ಜನಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮ ನವೆಂಬರ್ 26 ರಂದು ಕೋಟದ ವಿವೇಕ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಉಪಾಧ್ಯಕ್ಷ ವಾಸು ಪೂಜಾರಿ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯ ರಾಜು ಪೂಜಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಕಾರಂತ ಪ್ರತಿಷ್ಠಾನದ ಸದಸ್ಯರು, ಪಂಚಾಯತ್ ಅಧಿಕಾರಿ ವರ್ಗ, ಥೀಮ್ ಪಾರ್ಕ್, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೆಂದ್ರ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸಮಾಜ ಕಲ್ಯಾಣ ಇಲಾಖೆಯ ಆಪ್ತ ಸಹಾಯಕ ಹರೀಶ್ ಕುಮಾರ್ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!