ಮಣಿಪಾಲ: ಕಾಲು ಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಜಿಲ್ಲೆಯಲ್ಲಿ ಈ ರೋಗ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 3 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವು ನವೆಂಬರ್ 7 ರಿಂದ ಡಿಸೆಂಬರ್ 7 ರ ಅವಧಿಯಲ್ಲಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಈ ಕುರಿತು ಜಿಲ್ಲಾ ಮಟ್ಟದ ಕಾಲುಬಾಯಿ ರೋಗದ ನಿರ್ವಹಣಾ ಸಮಿತಿ ಸಭೆಯು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧ್ಯಕ್ಷತೆಯಲ್ಲಿ ನಡೆಯಿತು.
ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಕಟ್ಟೆಚ್ಚರ ವಹಿಸಿ ಕಾರ್ಯಕ್ರಮ ಅನುಷ್ಠಾನಗೊಳಿಸುವಂತೆ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ.ಶಂಕರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.