Sunday, September 22, 2024
Sunday, September 22, 2024

ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಸ್ವಯಂ ಪ್ರೇರಣೆಯಿಂದ ಪಾಲ್ಗೊಳ್ಳಿ: ಕರಾವಳಿ ಪೊಲೀಸ್ ಠಾಣೆ ಗಂಗೊಳ್ಳಿ ಪಿಎಸ್ಐ ವಿಜಯ ಅಮೀನ್

ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಸ್ವಯಂ ಪ್ರೇರಣೆಯಿಂದ ಪಾಲ್ಗೊಳ್ಳಿ: ಕರಾವಳಿ ಪೊಲೀಸ್ ಠಾಣೆ ಗಂಗೊಳ್ಳಿ ಪಿಎಸ್ಐ ವಿಜಯ ಅಮೀನ್

Date:

ಕುಂದಾಪುರ: ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಸ್ವಯಂ ಪ್ರೇರಣೆಯಿಂದ ನಾವು ಪಾಲ್ಗೊಳ್ಳಬೇಕು. ಈ ನಿಟ್ಟಿನಲ್ಲಿ ಕಾನೂನಿನ ಅರಿವನ್ನು ಕೂಡ ಹೊಂದಿರಬೇಕು ಎಂದು ಕರಾವಳಿ ಪೊಲೀಸ್ ಠಾಣೆ ಗಂಗೊಳ್ಳಿ ಪಿಎಸ್ಐ ವಿಜಯ ಅಮೀನ್ ಆರ್ ಹೇಳಿದರು.

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಕರಾವಳಿ ಕಾವಲು ಪೊಲೀಸ್ ಠಾಣೆ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ನಡೆದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ನಡೆದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಥಾಮಸ್ ಪಿ.ಎ ಮಾತನಾಡಿ, ಭ್ರಷ್ಟಾಚಾರ ನಿರ್ಮೂಲನೆ ಎನ್ನುವಂತದ್ದು ನಮ್ಮ ನಮ್ಮ ಮನೆ ಮನಗಳಿಂದಲೇ ಪ್ರಾರಂಭವಾಗಬೇಕಾಗಿದೆ. ಕೆಟ್ಟದ್ದನ್ನು ವಿರೋಧಿಸುವುದರ ಜೊತೆಗೆ ಕೆಟ್ಟದ್ದನ್ನು ಮಾಡದಿರುವುದು ಮುಖ್ಯ ಎಂದು ಅವರು ಅಭಿಪ್ರಾಯಪಟ್ಟರು.

ರೋಟರಿ ಕ್ಲಬ್ ಅಧ್ಯಕ್ಷೆ ಸುಗುಣ ಆರ್. ಕೆ., ಎನ್ಎಸ್ಎಸ್ ವಿದ್ಯಾರ್ಥಿ ಪ್ರತಿನಿಧಿ ಶ್ರೇಯಾ ಖಾರ್ವಿ, ಕರಾವಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಉದಯ ಗೌಡ ಮೊದಲಾದವರು ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!