Wednesday, November 27, 2024
Wednesday, November 27, 2024

ಸಾಂಸ್ಕೃತಿಕ ಮೌಲ್ಯಗಳನ್ನು ಅರಿಯಲು ಹಬ್ಬಗಳು ಮಾದರಿ: ವಿದ್ವಾನ್‌ ಗಣಪತಿ ಭಟ್‌

ಸಾಂಸ್ಕೃತಿಕ ಮೌಲ್ಯಗಳನ್ನು ಅರಿಯಲು ಹಬ್ಬಗಳು ಮಾದರಿ: ವಿದ್ವಾನ್‌ ಗಣಪತಿ ಭಟ್‌

Date:

ಉಡುಪಿ: ಕಾರ್ಕಳದ ಕ್ರಿಯೇಟಿವ್‌ ಪದವಿಪೂರ್ವ ಕಾಲೇಜಿನಲ್ಲಿ ದೀಪಾವಳಿ ಮತ್ತು ತುಳಸಿ ಪೂಜಾ ಹಬ್ಬವನ್ನು ಸಡಗರದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ನಮ್ಮ ಪರಂಪರೆ, ಸಾಂಸ್ಕೃತಿಕ ಮೌಲ್ಯಗಳನ್ನು ತಿಳಿಸಲು ಮತ್ತು ಹಬ್ಬಗಳ ಮಹತ್ವ ತಿಳಿಯಲು ಭಾರತೀಯ ಪರಂಪರೆಯ ಹಬ್ಬಗಳು ಮಾದರಿಯಾಗಿವೆ ಎಂದು ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ತಿಳಿಸಿದರು.

ಸಂಸ್ಥಾಪಕರಲ್ಲೊಬ್ಬರಾದ ಅಶ್ವಥ್‌ ಎಸ್‌ ಎಲ್‌ ಮಾತನಾಡಿ ಭಾರತೀಯ ಹಬ್ಬಗಳು ವೈಜ್ಞಾನಿಕವಾಗಿಯೂ, ಸಾಂಸ್ಕೃತಿಕವಾಗಿಯೂ ಅತ್ಯಂತ ಮಹತ್ವ ಹೊಂದಿದೆ. ಆಧ್ಯಾತ್ಮಿಕವಾಗಿ ನೋಡಿದಾಗಲು ಶ್ರೇಷ್ಠ ಮೌಲ್ಯಗಳ ಪ್ರತೀಕವಾಗಿವೆ. ಎಲ್ಲರಲ್ಲೂ ಹಬ್ಬವು ಸಾಮರಸ್ಯವನ್ನು ತರಲಿ ಎಂದು ಹಾರೈಸಿದರು.

ವಿದ್ಯಾರ್ಥಿಗಳು ಭಾರತೀಯ ಪರಂಪರೆಯನ್ನು ಬಿಂಬಿಸುವ ಉಡುಗೆ-ತೊಡುಗೆಗಳನ್ನು ಧರಿಸಿ ದೀಪ ಬೆಳಗಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸಂಸ್ಥೆಯ ಸಂಸ್ಥಾಪಕರುಗಳಾದ ಡಾ. ಗಣನಾಥ ಶೆಟ್ಟಿ, ಅಮೃತ್‌ ರೈ, ಆದರ್ಶ ಎಂ ಕೆ., ವಿಮಲ್‌ ರಾಜ್‌, ಗಣಪತಿ ಕೆ ಎಸ್‌., ಉಪನ್ಯಾಸಕ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಂಸ್ಥೆಯ ಆವರಣದಲ್ಲಿ ದೀವಟಿಗೆ ಬೆಳಕಿನಲ್ಲಿ ಸುಡುಮದ್ದು ಪ್ರದರ್ಶನ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯುವನಿಧಿ ಯೋಜನೆ: ಸ್ವಯಂ ಘೋಷಣೆ ಕಡ್ಡಾಯ

ಉಡುಪಿ, ನ.27: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಗೆ...

ತುಳು ಕಾದಂಬರಿ ಗತಿ ಬದಲಾಯಿಸಿದ ‘ನಾಣಜ್ಜೆರ್’

ಮೂಡುಬಿದಿರೆ, ನ.27: ತುಳು ಕಾದಂಬರಿ ಪ್ರಕಾರದ ದಿಕ್ಕನ್ನೇ ಬದಲಾಯಿಸಿದ ಕೃತಿ ‘ನಾಣಜ್ಜೆರ್...

ದೇಶದ ಸಂಸ್ಕೃತಿಯಲ್ಲಿ ಸಂವಿಧಾನದ ಬೇರು

ವಿದ್ಯಾಗಿರಿ (ಮೂಡುಬಿದಿರೆ), ನ.27: ನಮ್ಮ ಸಂವಿಧಾನದ ಮೂಲತತ್ವಗಳ ಬೇರು ದೇಶದ ಇತಿಹಾಸ,...

ಯಕ್ಷಾರಾಧನೆ ರಂಗದೋಕುಳಿ

ಕೋಟ, ನ.27: ಒಂದು ಕಾಲದಲ್ಲಿ ಯಕ್ಷಗಾನದ ಮಹತ್ವ ಅರಿತವರು ಬಹಳ ವಿರಳವಾಗಿದ್ದರು,...
error: Content is protected !!