ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಪ್ರಸಿದ್ಧ ವಿಜ್ಞಾನಿ, ಕಥೆಗಾರ್ತಿ, ಮಾನವತಾವಾದಿ, ಲೇಖಕಿ, ಬದುಕು ಬದಲಿಸಬಹುದು ಖ್ಯಾತಿಯ ನೇಮಿಚಂದ್ರ ಭೇಟಿ ನೀಡಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಶಾಲೆಯ ವಿದ್ಯಾರ್ಥಿಗಳಿಗೆ ಪರಿಚಯಿಸುವ ಮೂಲಕ ವಿದ್ಯಾರ್ಥಿಗಳನ್ನು ಸಾಧನೆಗೆ ಪ್ರೇರೇಪಿಸುವ ಸದುದ್ದೇಶದೊಂದಿಗೆ ‘ವಿಜ್ಞಾನಿಯೊಂದಿಗೆ ಸಂವಾದ’ ಎನ್ನುವ
ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಗಾರದಲ್ಲಿ ಸಂಸ್ಥೆಯ ಏಳರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳು ವಿಜ್ಞಾನಿ ನೇಮಿಚಂದ್ರರೊಂದಿಗೆ ಸಂವಾದದಲ್ಲಿ ಪಾಲ್ಗೊಂಡರು. ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ ಮಾತನಾಡಿದ ವಿಜ್ಞಾನಿಗಳು ಬದುಕಿನ ಪ್ರತಿಯೊಂದು ಕಷ್ಟದ ಸಂದರ್ಭದಲ್ಲಿಯೂ ಕೂಡ ಆಯ್ಕೆಗಳಿರುತ್ತವೆ. ಯಾವುದೇ ಸೋಲು ನಮ್ಮ ಬದುಕಿನ ಸೋಲಲ್ಲ ಎನ್ನುತ್ತಾ, ಅನೇಕ ಸಾಧಕರ ನಿದರ್ಶನದೊಂದಿಗೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾದರು.
ನಂತರ ವಿಜ್ಞಾನಿಗಳು ಶಾಲೆಯಲ್ಲಿ ನೂತನವಾಗಿ ಸುಸಜ್ಜಿತವಾಗಿ ನಿರ್ಮಾಣಗೊಂಡ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿದರು. ತದನಂತರ ವಿಜ್ಞಾನಿಗಳು ಸಂಸ್ಥೆಯ ಶಿಕ್ಷಕರಿಗೆ ಅತ್ಯುತ್ತಮವಾದ ಮಾರ್ಗದರ್ಶನ ನೀಡಿದರು.
ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಸ್ಮರಣಿಕೆಯನ್ನು ನೀಡಿ ಗೌರವಿಸಿದರು. ಕಾರ್ಯಗಾರದಲ್ಲಿ ಸಂಸ್ಥೆಯ ಉಪ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಇತರ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರು, ಉಪಸ್ಥಿತರಿದ್ದರು. ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.