ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢಶಾಲೆಯ ವಿದ್ಯಾರ್ಥಿನಿ ನವಮಿ ಎಸ್. ಶೆಟ್ಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿಪೂರ್ವ ಕಾಲೇಜು ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆಯೋಜನೆಗೊಂಡ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೋಟ ಸ್ಪರ್ಧೆ 2022-23 ಇದರಲ್ಲಿ ಭಾಗವಹಿಸಿ 17 ರ ವಯೋಮಾನದ ಕರಾಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್, ಉಪಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್., ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಕರಾಟೆ ಶಿಕ್ಷಕರಾದ ಸಂದೀಪ್ ಅಭಿನಂದಿಸಿದ್ದಾರೆ.