ಉಡುಪಿ: ಪಡಿ ಸಂಸ್ಥೆ ಮಂಗಳೂರು ಮತ್ತು ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ ವತಿಯಿಂದ ಕರ್ನಾಟಕದಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಮತ್ತು ಮಕ್ಕಳ ಜೊತೆ ನೇರ ಮತ್ತು ಪರೋಕ್ಷವಾಗಿ ಕೆಲಸ ಮಾಡುವ ಸಂಸ್ಥೆಗಳು ಇಲಾಖೆಗಳಿಗೆ ಸಂಬಂಧಿಸಿದಂತೆ, ರಾಜ್ಯ ಮಕ್ಕಳ ಸುರಕ್ಷಾ ನೀತಿ- 2016ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ಸಭೆ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಕಛೇರಿಯಲ್ಲಿ ನಡೆಯಿತು.
ರಾಜ್ಯ ಮಕ್ಕಳ ಸುರಕ್ಷತಾ ನೀತಿ- 2016ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಪಡಿ ಸಂಸ್ಥೆಯ ಸಿಬ್ಬಂಧಿ ವರ್ಗದವರು, ನಮ್ಮ ಭೂಮಿ ಸಂಸ್ಥೆಯ ಅಧಿಕಾರಿ ವರ್ಗದವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ಘಟಕ, ಚೈಲ್ಡ್ ಲೈನ್ -1098, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಪೊಲೀಸ್ ಇಲಾಖೆ, ಸಾಂತ್ವಾನ ಕೇಂದ್ರ ಉಡುಪಿ, ಶಿಶು ಪಾಲನ ಕೇಂದ್ರದವರು ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಅಭಿಪ್ರಾಯವನ್ನು ತಿಳಿಸಿದರು.